CHUMBAKA VANI
News

Chumbaka vani

21st November 2024

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ. ಡಿ.ಎನ್. ಕೃಷ್ಣಾರೆಡ್ಡಿ.


ಬಾಗೇಪಲ್ಲಿ:- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಜಾಗೃತಿ ಮೂಡಿಸಲೆಂದು ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಮಂಗಳವಾರ ತಾಲ್ಲೂಕು ಪ್ರವೇಶಿಸುತ್ತಿದ್ದಂತೆ, ಕನ್ನಡದ ಮನಸ್ಸುಗಳು ಸಂಭ್ರಮದಿಂದ ಸ್ವಾಗತಿಸಿದವು.


ಶಾಸಕ ಎಸ್. ಎನ್. ಸುಬ್ಬಾರೆಡ್ಡಿ

ನೇತೃತ್ವದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಕನ್ನಡ ಸಂಘಟನೆಗಳು, ರೈತ ಸಂಘಟನೆಗಳು, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ವತಿಯಿಂದ ಪ್ರವಾಸಿ ಮಂದಿರದ ಮುಂದೆ ಆದ್ದೂರಿ ಕನ್ನಡದ ರಥವನ್ನು ಸ್ವಾಗತಿಸಲಾಯಿತು.


ಪಟ್ಟಣದ ಡಿ.ವಿ.ಜಿ.ಮುಖ್ಯ ರಸ್ತೆಯಲ್ಲಿ ಕನ್ನಡ ಜ್ಯೋತಿ ರಥದ ಭವ್ಯ ಮೆರವಣಿಗೆ ನಡೆಯಿತು. ಕನ್ನಡ ಬಾವುಟದ ಬಣ್ಣಗಳಿರುವ ಶಾಲುಗಳನ್ನು ಧರಿಸಿದ ಕನ್ನಡಾಭಿಮಾನಿಗಳು ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಕನ್ನಡಕ್ಕೆ ಜಯವಾಗಲಿ, ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ ಎನ್ನುವ ಕನ್ನಡಪರ ಘೋಷಣೆಗಳನ್ನು ಮೊಳಗಿಸಿದರು.


ಈ ಸಂದರ್ಭದಲ್ಲಿ

ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ರವರು ಮಾತನಾಡಿ ಕನ್ನಡ ಭಾಷೆ 2000 ವರ್ಷಗಳ ಇತಿಹಾಸ ಇರುವ

ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉತ್ತಮವಾಗಿ ಕೆಲಸ ಮಾಡುತ್ತಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ಕನ್ನಡ ಜ್ಯೋತಿ ರಥಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ, ಪ್ರಚಾರ ಕಾರ್ಯಕ್ರಮ ಗಡಿ ಭಾಗಗಳಲ್ಲಿ ವ್ಯವಸ್ಥಿತವಾಗಿ ಜನಜಾಗೃತಿ ಮೂಡಿಸುವ ಕೆಲಸ ಆಗಬೇಕು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಕೋರಿದರು.


ಜಿಲ್ಲಾ ಕಸಾಪ ಅಧ್ಯಕ್ಷ ಕೋಡಿ ರಂಗಪ್ಪ ಮಾತನಾಡಿ, ಇಂದಿನ ಆಧುನಿಕ ಜೀವನದ ಭರಾಟೆಯಲ್ಲಿ ಗಡಿ ನಾಡು ಪ್ರದೇಶದಲ್ಲಿ ಜಾನಪದ ಮರೆಯಾಗುತ್ತಿದ್ದು, ಇದನ್ನು ಉಳಿಸಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅನೇಕ ರೀತಿಯ ಪ್ರಯತ್ನಗಳು ನಡೆಯಬೇಕಿದೆ. ಜಾನಪದ ನಮ್ಮ ಭಾರತೀಯ ಸಂಸ್ಕøತಿಯ ಅಡಿಗಲ್ಲಾಗಿದೆ. ನಮ್ಮ ಸ್ವಂತಿಕೆಯನ್ನು ಉಳಿಸಿಕೊಳ್ಳಬೇಕಾದರೆ ಜಾನಪದ ಉಳಿಯಬೇಕು. ಹಾಗಾಗಿ ನಮ್ಮ ಬದುಕಿನ ಜೀವಾಳವಾದ ಜಾನಪದ ಸಂಪತ್ತನ್ನು ಉಳಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ನಿರಂತರ ಕೈಂಕರ್ಯ ಸಲ್ಲಿಸುತ್ತಿದೆ ಎಂದರು.


ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಎನ್. ಕೃಷ್ಣಾರೆಡ್ಡಿ ರವರು ಮಾತನಾಡಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸುತ್ತಿದೆ. ಅದರ ಭಾಗವಾಗಿ ತಾಲೂಕಿನಲ್ಲಿ ಸಂಚರಿಸುತ್ತಿದೆ. ಸಮ್ಮೇಳನದ ಯಶಸ್ವಿಗೆ ಎಲ್ಲ ಕನ್ನಡಾಭಿಮಾನಿಗಳು ,ಪ್ರಗತಿಪರ ರೈತರು, ಮಹಿಳೆಯರು, ವಿವಿಧ ಕನ್ನಡಪರ ಸಂಘಟನೆಗಳು ಕೈ ಜೋಡಿಸಬೇಕು ಎಂದು ಕೋರಿದರು.


ಈ ಸಂದರ್ಭದಲ್ಲಿ ತಹಶಿಲ್ದಾರ್ ಎನ್. ಮನೀಶಾ ಮಹೇಶ್ ಪತ್ರಿ, ಬಿಇಓ ವೆಂಕಟೇಶಪ್ಪ.

ಕೃಷಿ ಇಲಾಖೆ ನಿರ್ದೇಶಕಿ ಲಕ್ಷ್ಮೀ, ನರೇಂದ್ರ, ಸಮಾಜ ಕಲ್ಯಾಣ ಇಲಾಖೆ ಶಿವಪ್ಪ, ಕರವೇ ಹರೀಶ್, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಹಾಗೂ ಸಾರ್ವಜನಿಕರು ಹಾಜರಿದ್ದರು ಕನ್ನಡ ಜ್ಯೋತಿ ರಥಕ್ಕೆ ಆದ್ದೂರಿ ಸ್ವಾಗತ ಕೋರಿದರು.