
18th October 2024
ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿತರಾಗಿ ನಿನ್ನೆ ಜೈಲಿನಿಂದ ಬಿಡುಗಡೆಯಾದ ರಾಜ್ಯದ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ಮತ್ತು ವಿಪಕ್ಷಗಳ ಸರ್ಕಾರಗಳನ್ನು ಬೀಳಿಸಲು ಪ್ರಯತ್ನ ನಡೆಸುತ್ತಿದೆ. ಆದುದರಿಂದ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ತಮ್ಮನ್ನು ಬಂಧಿಸಲಾಗಿದೆ ಎಂದು ನೀಡಿರುವ ಹೇಳಿಕೆಯನ್ನು ಬಿಜೆಪಿ ಧುರೀಣ, ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕರಾದ ಜಿ.ಜನಾರ್ದನರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ. ಅವರ ಹೇಳಿಕೆಯು ಬಳ್ಳಾರಿ ಜನತೆಗೆ ನಗೆ ತರಿಸುವಂತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಜನಾಂಗದವರ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಈ ಹಿಂದೆ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದರು. ಆದರೆ ಇದೀಗ ವಾಲ್ಮೀಕಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ಹೆಗ್ಗಳಿಕೆ ಎಂದು ಟೀಕಿಸಿದರು.
ಈ ಹಿಂದೆ 2011ರ ಸೆಪ್ಟಂಬರ್ನಲ್ಲಿ ನನ್ನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ. ಅಂತೆಯೇ 2012 ರಲ್ಲಿ ಶಾಸಕ ಬಿ.ನಾಗೇಂದ್ರ ಅವರ ಬಂಧನವಾದಾಗಲೂ ಯುಪಿಎ ಸರ್ಕಾರವೇ ಅಧಿಕಾರದಲ್ಲಿತ್ತು. 2012ರಲ್ಲಿ ಆನಂದ್ಸಿAಗ್, ಸುರೇಶ್ ಬಾಬು, ನಾಗೇಂದ್ರ, ಸತೀಶ್ಶೈಲ್ ಸೇರಿ ಐವರು ಶಾಸಕರನ್ನು ಬಂಧಿಸಲಾಗಿತ್ತು. ಯುಪಿಎ ಸರ್ಕಾರದಲ್ಲಿ ನಾಗೇಂದ್ರರ ಬಂಧನವಾಗಿ ಎರಡು ವರ್ಷ ಜೈಲಿನಲ್ಲಿದ್ದುದನ್ನು ಅವರು ಮರೆಯಬಾರದು ಎಂದು ರೆಡ್ಡಿ ಟಾಂಗ್ ನೀಡಿದರು.
ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ನಾಗೇಂದ್ರ ಅವರ ಮೇಲೆ ದೊಡ್ಡ ದೊಡ್ಡ ಆರೋಪಗಳಿವೆ. ಹಗರಣದಲ್ಲಿ ಸಿಲುಕಿ ಹಾಕಿಕೊಂಡು, ಬಿಜೆಪಿಯ ಮೇಲೆ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಹೀರೊಯಿಜಂ ತೋರಿಸೋಕೆ ಹೋಗಬೇಡಿ. ವಾಲ್ಮೀಕಿ ನಿಗಮದ ಹಣವನ್ನು ವೈಯಕ್ತಿಕವಾಗಿ ಬಳಸಲಾಗಿದೆ. ವಿಮಾನ ಪ್ರಯಾಣ, ಪೆಟ್ರೋಲ್-ಡೀಸೆಲ್, ವಿದ್ಯುತ್ ಬಿಲ್ ತುಂಬಲು, ಲ್ಯಾಂಬರ್ಗಿನಿ ಕಾರ್ ಖರೀದಿಸಲು ಈ ಹಣವನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಸಾಕ್ಷಿ ಸಮೇತ, ಬ್ಯಾಂಕ್ ಡೀಟೇಲ್ ಸಹಿತ ಇಡಿಯವರು ಬಹಿರಂಗ ಪಡಿಸಿದ್ದಾರೆ ಎಂದು ಜನಾರ್ದನರೆಡ್ಡಿ ವಿವರಿಸಿದರು.
ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಈ ನಿಗಮದ ಹಣವನ್ನು ಬಳ್ಳಾರಿ, ಕೊಪ್ಪಳ, ರಾಯಚೂರು ಹಾಗೂ ತೆಲಂಗಾಣ ರಾಜ್ಯದಲ್ಲಿ ಖರ್ಚು ಮಾಡಲಾಗಿದೆ ಎಂಬುದು ಇಡಿಯವರ ವಿಚಾರಣೆಯಿಂದ ಬಯಲಾಗಿದೆ. 14 ಕೋಟಿಗೂ ಹೆಚ್ಚು ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಮೂವರು ಶಾಸಕರಿಗೆ ಚುನಾವಣೆಯಲ್ಲಿ ಹಣ ಹಂಚಲು ಬಳಸಲಾಗಿತ್ತು. ಶಾಸಕರುಗಳಾದ ನಾರಾ ಭರತ್ರೆಡ್ಡಿ, ಕಂಪ್ಲಿ ಗಣೇಶ್, ಕೂಡ್ಲಿಗಿಯ ಡಾ||ಶ್ರೀನಿವಾಸ್ ಅವರಿಗೆ 14 ಕೋಟಿಗೂ ಹೆಚ್ಚು ಹಣವನ್ನು ಹಂಚಲು ನೀಡಲಾಗಿದೆ ಎಂದು ಇಡಿ ಹೇಳಿದೆ. ಒಬ್ಬೊಬ್ಬ ಮುಖಂಡರಿಗೆ ತಲಾ ಹತ್ತು ಸಾವಿರ ಕೊಟ್ಟಿದ್ದಾರೆ ಎನ್ನುವುದಾಗಿಯೂ ಹೇಳಲಾಗಿದೆ, ಇದೆಲ್ಲವೂ ಇಡಿ ಚಾರ್ಜ್ ಶೀಟ್ನಲ್ಲಿ ಉಲ್ಲೇಖವಾಗಿದೆ ಎಂದು ತಿಳಿಸಿದರು.
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ