
9th March 2025
ಜಿ ಎಮ್ ನ್ಯೂಜ್ ಕುಷ್ಟಗಿ.
ಕುಷ್ಟಗಿ ಪಟ್ಟಣದ ಕರೀಂ ಕಾಲೋನಿಯ ಕನಕದಾಸ ಸರ್ಕಲ್ ಹತ್ತಿರದ ನಿವಾಸಿ ವೀರಶೈವ ಲಿಂಗಾಯತ ಸಮಾಜದ ಹಿರಿಯರಾದ ಬಸಯ್ಯ ಮಹಾಂತಯ್ಯ ಗೋನಾಳಮಠ (88) ಇಂದು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರೆಂದು ತಿಳಿಸಲು ವಿಶಾದವೆನಿಸುತ್ತದೆ.
ಮೃತರಾದ ಬಸಯ್ಯ ಗೋನಾಳಮಠ ಅವರು
ಸರ್ಕಾರಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಜೀವನ ನಡೆಸುತ್ತಿದ್ದರು. ಮೃತರ ಪಾರ್ಥಿವ ಶರೀರವು ಬೆಂಗಳೂರಿನಿಂದ ಇಂದು ಸಾಯಂಕಾಲ 5:00 ಗಂಟೆಗೆ ಕುಷ್ಟಗಿ ಪಟ್ಟಣಕ್ಕೆ ಬರಬಹುದೆಂದು ಅಂದಾಜಿಸಲಾಗಿದೆ.
ಮೃತರು ಸುಧೀರ್ ಗೋನಾಳಮಠ, ಪ್ರದೀಪ್ ಗೋನಾಳಮಠ ಇವರ ತಂದೆಯವರಾಗಿದ್ದಾರೆ. ಮೃತರು ಹೆಂಡತಿ, ಇಬ್ಬರು ಗಂಡು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಶಿಷ್ಯ ಬಳಗ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ನಾಳೆ 10-03-2025 ರಂದು ಬೆಳಗ್ಗೆ 10-00 ಗಂಟೆಗೆ ಕುಷ್ಟಗಿ ನಗರದ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ಜರಗುವುದು.
ಮೃತ ಬಸಯ್ಯ ಗೋನಾಳಮಠ ಗುರುಗಳಿಗೆ ಕುಷ್ಟಗಿ ಜನತೆಯಿಂದ ಭಾವಪೂರ್ಣ ಶ್ರದ್ಧಾಂಜಲಿ.
ವರದಿ : ಭೀಮಸೇನರಾವ್ ಕುಲಕರ್ಣಿ ಕುಷ್ಟಗಿ.
19th February 2025
ಜಿಎಂ ನ್ಯೂಜ್ ಕುಷ್ಟಗಿ.
ಕೊಪ್ಪಳ ಫೆಬ್ರವರಿ 19 : ಕೊಪ್ಪಳ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮಗೆ ಇರುವ ನಿಯಮಗಳ ಕಾನೂನು ವ್ಯಾಪಿಯಲ್ಲಿ ಕಾರ್ಯನಿರ್ವಹಿಸಬೇಕು. ಅದನ್ನು ಬಿಟ್ಟು ಜನರಿಗೆ ಕಿರುಕುಳ ನೀಡುವ ಯಾವುದೇ ಪ್ರಕರಣಗಳು ಕಂಡು ಬಂದರೆ ಅಂಥಹ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಬುಧವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲೆಯ ಮೈಕ್ರೋ ಪೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನರಿಗೆ ಸಾಲ ನೀಡುವಾಗ ತಮ್ಮ ಕಂಡೀಷನಗಳ ಕುರಿತು ಸ್ಪಷ್ಟವಾಗಿ ಅವರಿಗೆ ಅರ್ಥವಾಗುವ ರೀತಿಯಲ್ಲಿ ತಿಳಿಸಬೇಕು ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಸಾಲ ನೀಡಬೇಕು. ಅದನ್ನು ಬಿಟ್ಟು ಅವರಿಗೆ ಸರಿಯಾಗಿ ಮಾಹಿತಿ ನೀಡದೆ ಸಾಲ ನೀಡುವದರ ಜೊತೆಗೆ ಅವರಿಗೆ ಕಿರುಕೂಳ ನೀಡಿದರೆ ಇದು ಕಾನೂನಿನ ಉಲ್ಲಂಘನೆಯಾಗುತ್ತದೆ. ತಾವು ಸಾಲ ಕೊಟ್ಟಾಗ, ಜನರಿಂದ ಕಾನೂನು ರೀತಿಯಲ್ಲಿ ಅವರಿಂದ ಹಣವನ್ನು ಮರಳಿ ಪಡೆಯಬೇಕೆಂದು ಹೇಳಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕೂಳ ಪ್ರಕರಣಗಳ ಹಿನ್ನೆಲೆಯಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶವನ್ನು ರಾಜ್ಯ ಸರ್ಕಾರ ದಿನಾಂಕ 12-02-2025 ರಂದು ಜಾರಿಗೆ ತಂದಿದೆ. ಇದರ ಹೊರತಾಗಿ ಈಗಾಗಲೇ ಫೈನಾನ್ಸ್ ಸಂಸ್ಥೆಗಳ ಕುರಿತು ಆರ್.ಬಿ.ಐ ಸ್ಪಷ್ಟವಾದ ಗೈಡಲೈನ್ಸ್ ಇದೆ ಆದರೆ ಅದನ್ನು ತಾವು ಯಾರು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆಗಳಿಂದ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗೆ ಸಂಬಂಧಿಸಿದ ಅಧ್ಯಾದೇಶವಾಗಿದೆ ಎಂದು ಹೇಳಿದರು.
ಸೆಕ್ಷನ್ 3 ರಡಿ ತಿಳಿಸಿದಂತೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಜಿಲ್ಲೆಯ ನೋಂದಣಿ ಪ್ರಾಧಿಕಾರಿಯ ಮುಂದೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಈ ಅಧ್ಯಾದೇಶದ ಪ್ರಾರಂಭದ ತರುವಾಯ, ನೋಂದಣಿ ಪ್ರಾಧಿಕಾರಿಯಿಂದ ಈ ಅಧ್ಯಾದೇಶದಡಿ ನೋಂದಣಿ ಪಡೆಯದೆ ಯಾವುದೇ ಸಾಲಗಳನ್ನು ಮಂಜೂರು ಮಾಡತಕ್ಕದ್ದಲ್ಲ ಅಥವಾ ಯಾವುದೇ ಸಾಲವನ್ನು ವಸೂಲು ಮಾಡುವಂತಿಲ್ಲ. ನೋಂದಣಿ ಪ್ರಾಧಿಕಾರಿಯು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾರ್ಯಾಚರಣೆಗಾಗಿ ನಿರ್ದಿಷ್ಟಪಡಿಸಬಹುದಾದಂಥ ವಿಧಾನದಲ್ಲಿ ಒಂದು ವರ್ಷದ ಅವಧಿಗಾಗಿ ನೋಂದಣಿಯನ್ನು ಮಾಡಿಕೊಳ್ಳಬಹುದಾಗಿದೆ.
ನೋಂದಣಿ ಪ್ರಾಧಿಕಾರಿಯು ಮೈಕ್ರೋ ಫೈನಾನ್ಸ್ ಸಂಸ್ಥೆಗಳು (ಎಂ.ಎಫ್.ಐ) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳ ಅಥವಾ ಲೇವಾ ದೇವಿದಾರರ ನೋಂದಣಿಯನ್ನು ರದ್ದುಗೊಳಿಸಬಹುದು ಅಥವಾ ರದ್ದುಪಡಿಸಲು ಶಿಫಾರಸ್ಸು ಮಾಡಬಹುದು. ನೋಟೀಸು ನೀಡದ ಹೊರತು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು (ಎಂ.ಎಫ್.ಐ) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾ ದೇವಿದಾರರಿಗೆ ಅಂಥ ನೋಟೀಸಿನ ವಿರುದ್ಧ ಅಹವಾಲನ್ನು ಹೇಳಿಕೊಳ್ಳುವ ಸೂಕ್ತ ಅವಕಾಶವನ್ನು ನೀಡಿದ ಹೊರತು ನೋಂದಣಿ ರದ್ದತಿಯ ಆದೇಶವನ್ನು ಹೊರಡಿಸತಕ್ಕದ್ದಲ್ಲ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ ಸಾಲಗಾರರ ಮನೆಗೆ ಹೋಗಿ ಅವರ ಕುಟುಂಬದ ಸದಸ್ಯರಿಗೆ ಮತ್ತು ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ತೊಂದರೆ ಕೊಡುವದನ್ನು ಮೈಕ್ರೋ ಫೈನಾನ್ಸನವರು ಮಾಡಬಾರದು. ಅವರಿಗೆ ಕಾನೂನು ರೀತಿಯಲ್ಲಿ ಹಣ ವಸೂಲಿ ಮಾಡಬೇಕು. ಅದನ್ನು ಬಿಟ್ಟು ನಾಲ್ಕು ಜನರಿಗೆ ಅವರ ಮನೆಗಳಿಗೆ ಕಳಿಸಿ ಕುಟುಂಬದ ಸದಸ್ಯರಿಗೆ ತೊಂದರೆ ಮಾಡುವುದು ಕಾನೂನಿನ ಉಲ್ಲಂಘನೆಯಾಗುತ್ತದೆ. ನಿಮ್ಮ ಹಣದ ರಿಕವರಿ ನಿಯಮದ ಪ್ರಕಾರ ಮಾಡಿ. ಜನರಿಗೆ ತೊಂದರೆ ಕೊಟ್ಟಾಗ ಒಂದು ಡೆತ್ ಏನಾದರೂ ಆದರೆ ಅದು ದೊಡ್ಡ ಅಫರಾಧ ಆಗುತ್ತದೆ. ಅದಕ್ಕಾಗಿಯೆ ಜನರಿಗೆ ತೊಂದರೆ ಆಗಬಾದರು ಎನ್ನುವ ಕಾರಣಕ್ಕಾಗಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಕಾಯ್ದೆ ಜಾರಿಗೆ ಬಂದಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ. 2025 ಕಾನೂನಿನ ಕುರಿತು ಸವಿವರವಾದ ಮಾಹಿತಿಯನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಗೆ ನೀಡಿದರು.
ಈ ಕಾರ್ಯಾಗಾರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ ಕುಮಾರ್, ಲೀಡಬ್ಯಾಂಕ್ ಮ್ಯಾನೇಜರ್ ವಿರೇಂದ್ರಕುಮಾರ ಮತ್ತು ಜಿಲ್ಲೆಯ ಎಲ್ಲಾ ತಾಲೂಕಿನ ತಹಶಿಲ್ದಾರರು, ಲೇವಾದೇವಿ ಹಾಗೂ ಗಿರವಿದಾರರು. ಫೈನಾನ್ಸ ಹಾಗೂ ಫೈನಾನ್ಸ್ ಕಾರ್ಪೊರೇಷನ್ ಮತ್ತು ಸಹಕಾರ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
25th December 2024
ಜಿಎಂ ನ್ಯೂಜ್ ಕುಷ್ಟಗಿ.
ಕುಷ್ಟಗಿ : ದೇವರಾಜಗೌಡ ಪೋಲಿಸ್ ಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರು ಗುಮಗೇರಾ ಇವರು ಇಂದು ದಿನಾಂಕ 25-12-2024 ಬುಧುವಾರ ದಂದು ಮಧ್ಯಾಹ್ನ ಮೂರು ಗಂಟೆಗೆ ಶಿವಾಧೀನರಾಗಿರುತ್ತಾರೆ.
ಶ್ರೀಯುತರು ಲ್ಯಾಂಡ್ ಲಾರ್ಡ್ ಹಾಗೂ ಪ್ರಗತಿಪರ ಕೃಷಿಕರಾಗಿ ರೈತ ಮುಖಂಡರಾಗಿದ್ದರು. ಕುಷ್ಟಗಿಯ ಎಂ.ಪಿ.ಎಂ.ಸಿ. ಯಲ್ಲಿ ಶಿವಶಕ್ತಿ ಟ್ರೇಡರ್ಸ್ ಶಿರೋನಾಮೆಯ ವರ್ತಕರಾಗಿದ್ದರು. ಮೃತರ ಅಂತ್ಯಕ್ರಿಯೆ ನಾಳೆ ದಿನಾಂಕ 26-12-2024 ರಂದು ಮಧ್ಯಾಹ್ನ 12 ಗಂಟೆಗೆ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
3rd December 2024
ಜಿಎಂ ನ್ಯೂಜ್ ಕುಷ್ಟಗಿ.
ಕುಷ್ಟಗಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷರಾದ ಶಂಕರ್ ಬಿದರಿ ಅವರು ಇಂದು ಕುಷ್ಟಗಿ ನಗರಕ್ಕೆ ಭೇಟಿ ನೀಡಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಉಪಾಧ್ಯಕ್ಷರಾದ ಹಾಗೂ ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷರಾದ ಶಂಕರ್ ಬಿದರಿ ಅವರನ್ನು ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಯುವನಾಯಕರಾದ ದೊಡ್ಡಬಸನಗೌಡ ಬಯ್ಯಾಪುರ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕುಷ್ಟಗಿ ತಾಲೂಕಿನ ಹಾಗೂ ಕೊಪ್ಪಳ ಜಿಲ್ಲೆಯ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
16th November 2024
ಜಿಎಂ ನ್ಯೂಜ್ ಕುಷ್ಟಗಿ.
ಕುಷ್ಟಗಿ : ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆ ಮಂಗಳೂರು ಸಂಸ್ಥೆಯ ಅಧ್ಯಕ್ಷರು, ಹಿರಿಯ ಪತ್ರಕರ್ತರು, ಕಿತ್ತೂರು ಕರ್ನಾಟಕ ಕೊಪ್ಪಳ ಜಿಲ್ಲಾ ವರದಿಗಾರರು, ರಾಜಕೀಯ ಧುರೀಣರು ಹಾಗೂ ಸಾಹಿತಿಗಳಾದ ಶ್ರೀ ಕೊಟ್ರಪ್ಪ ತೋಟದ ಮುತ್ತಾಳ ಇವರು 14-11-2024 ಗುರುವಾರ ರಾತ್ರಿ 11:35ಕ್ಕೆ ವಿಧಿವಶರಾದರೆಂದು ತಿಳಿಸಲು ವಿಷಾದವೆನಿಸುತ್ತದೆ.
ಮೃತರ ಅಂತ್ಯಕ್ರಿಯೆಯು ಮಂಗಳೂರಿನ ರುದ್ರಭೂಮಿಯಲ್ಲಿ ಇಂದು ದಿನಾಂಕ 15-11-2024 ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನೆರವೇರಿತು.
ಇಂಗ್ಲಿಷನ್ನು ಸರಾಗವಾಗಿ ಸಿಡಿಲು ಬಡಿದಂತೆ ಮಾತನಾಡುತ್ತ ಅಧಿಕಾರಿಗಳಿಗೆ ಹುಬ್ಬೇರುವಂತೆ ಮಾಡುತ್ತಿದ್ದ ಹಿರಿಯ ಪತ್ರಕರ್ತರಾದ ಕೊಟ್ರಪ್ಪ ತೋಟದ ಮುತ್ತಾಳ ಇವರ ನಿಧನಕ್ಕೆ ಕುಷ್ಟಗಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿಯನ್ನು ಸಲ್ಲಿಸಲಾಗಿದೆ. ಹಾಗೂ
ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ದೇವರಲ್ಲಿ ಕೇಳಿಕೊಳ್ಳಲಾಗಿದೆ.
ವರದಿ : ಭೀಮಸೇನರಾವ್ ಕುಲಕರ್ಣಿ, ಪತ್ರಕರ್ತರು ಕುಷ್ಟಗಿ.
8th November 2024
ಜಿಎಂ ನ್ಯೂಜ್ ಕುಷ್ಟಗಿ.
ಕುಷ್ಟಗಿ : ಬೆಳಗಾವಿ ತಹಶೀಲ್ದಾರರ ಕಾರ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರುದ್ರಣ್ಣ ಯಡವನ್ನಾನವರ ಇವರ ಆತ್ಮಹತ್ಯೆ ಕುರಿತು ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುಷ್ಟಗಿ ತಹಶೀಲ್ದಾರರಾದ ಅಶೋಕ್ ಶಿಗ್ಗಾವಿ ರವರ ಮುಖಾಂತರ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ,
ಕಂದಾಯ ಸಚಿವರು ಕರ್ನಾಟಕ ಸರ್ಕಾರ, ಹಾಗೂ ಸರ್ಕಾರ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ಕರ್ನಾಟಕ ಸರ್ಕಾರ ರವರಿಗೆ, ಜಿಲ್ಲಾ ಕಂದಾಯ ನೌಕರರ ಸಂಘ ಕುಷ್ಟಗಿ ತಾಲೂಕಾ ಸಂಘದಿಂದ ಮನವಿ ಸಲ್ಲಿಸಲಾಯಿತು.
ಮೃತ ರುದ್ರಣ್ಣ ಯಡವನ್ನಾನವರ ಆತ್ಮಕ್ಕೆ ಶಾಂತಿ ಸಿಗಲೆಂದು ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಕುಷ್ಟಗಿ ತಾಲೂಕಾ ಘಟಕ ಕಂದಾಯ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಭೀಮಸೇನರಾವ್ ಕುಲಕರ್ಣಿ ಕುಷ್ಟಗಿ.
28th October 2024
ಜಿಎಂ ನ್ಯೂಜ್ ಕುಷ್ಟಗಿ.
ಕುಷ್ಟಗಿ : ಇಲ್ಲಿಯ ಪುರಸಭೆ ಸದಸ್ಯರಾದ ರಾಮಣ್ಣ ಬಿನ್ನಾಳ (52) ರವರು ಇಂದು ಸೋಮವಾರ ಸಾಯಂಕಾಲ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯೂ ನಾಳೆ ಮಂಗಳವಾರ 29-10-2024 ರಂದು ನಡೆಯಲಿದೆ.
ಅಕಾಲಿಕವಾಗಿ ನಿಧನರಾದ ಹಿನ್ನಲೆಯಲ್ಲಿ ಅವರ ಅಗಲಿಕೆಗೆ ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ರವರು ಕಂಬನಿ ಮಿಡಿದಿದ್ದು ಸ್ನೇಹಜೀವಿಯಾಗಿರುವ ರಾಮಣ್ಣನವರು ಹಿಂದುಳಿದ ವರ್ಗಗಳ ನಾಯಕರಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಸರ್ವ ಜನಾಂಗದ ಸೇವಾಕರ್ತರಾಗಿ ಜನಪರವಾಗಿ ಗುರುತಿಸಿಕೊಂಡು ಪುರಸಭೆ ಸದಸ್ಯರಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಕುಟುಂಬದವರಿಗೆ ಭಗವಂತ ನೀಡಲಿ ಎಂದು ಧೈರ್ಯ ತುಂಬುತ್ತ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಜಿ ಸಚಿವರ ಅನುಪಸ್ಥಿತಿಯಲ್ಲಿ ಅವರ ಸುಪುತ್ರರಾದ ದೊಡ್ಡಬಸನಗೌಡ ಪಾಟೀಲ್ ಬಯ್ಯಾಪುರ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಗಲಿದ ಕುಷ್ಟಗಿ ಪುರಸಭೆ ಕಾಂಗ್ರೆಸ್ ಪಕ್ಷದ ಸದಸ್ಯರಾದ ರಾಮಣ್ಣ ಬಿನ್ನಾಳ ರವರಿಗೆ ಸಂತಾಪ ಸೂಚಿಸಿದ್ದಾರೆ.