
gadag sanje news
10th December 2024
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನ

Gadag sanje news
7th December 2024
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ
ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ
ಗದಗ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ನಗರಸಭೆಯ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಶನಿವಾರ ಮಾಲಾರ್ಪಣೆ ಮಾಡಲಾಯಿತು.
ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷರು, ಗದಗ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕ ಡಿ.ಆರ್. ಪಾಟೀಲ ಅವರು ಮಾಲಾರ್ಪಣೆ ಮಾಡಿದರು.
ಗದಗ ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಬಸವರಾಜ ಕಡೆಮನಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಮಾರ್ತಾಂಡಪ್ಪ ಹಾದಿಮನಿ, ವಿನಾಯಕ ಬಳ್ಳಾರಿ, ವಿದ್ಯಾಧರ ದೊಡ್ಡಮನಿ, ಶಂಭು ಕಾಳೆ, ಶಿವು ಬಳ್ಳಾರಿ, ಉಮರ್‌ಫಾರೂಖ್ ಹುಬ್ಬಳ್ಳಿ, ಅನ್ವರ ಶಿರಹಟ್ಟಿ, ಮಹಮ್ಮದ್ ಶಾಲಗಾರ, ಶ್ರೀಕಾಂತ ಮಳಲಿ, ಎಚ್.ಕೆ. ಅಕ್ಕಿ, ಕೆ.ಎಚ್. ಬೆಲೂರ, ಬಾಲರಾಜ ಅರಬರ, ಶಾರುಖ್ ಹುಯಿಲಗೋಳ, ಅನಿಲ ಗರಗ, ಶಂಭು ಹುನಗುಂದ, ಮಹಮ್ಮದಸಾಬ್ ಬೆಟಗೇರಿ, ರಮೇಶ ರೋಣದ ಹಾಗೂ ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Gadag sanje news
7th December 2024
*ಬಾಣಂತಿ ಸಾವು: ಬಳ್ಳಾರಿ ಆಸ್ಪತ್ರೆಯಲ್ಲಿ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಪರಿಶೀಲನೆ: ತಪ್ಪಿತಸ್ಥರ ವಿರುದ್ಧ ಕ್ರಮ*
*ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ*:ಮುಖ್ಯಮಂತ್ರಿ ಸಿದ್ದರಾಮಯ್ಯ*
ಚಾಮರಾಜನಗರ, ಡಿಸೆಂಬರ್ 07: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.
*ತಪ್ಪಿತಸ್ಥರ ಮೇಲೆ ಕ್ರಮ*
ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.