11th October 2024
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕುಮತಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಲು ಜಾರಿ ನೀರಿನ ಹಳ್ಳದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರ (ಗುರು, ವಿನಯ್, ಸಾಗರ ) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ತಲಾ ಐದು ಲಕ್ಷ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ, ಶಿಕ್ಷಣಕ್ಕೆ ಆರ್ಥಿಕ ನೆರವು ಕೋರಿದ 15 ಕುಟುಂಬಗಳಿಗೆ ಐದು ಲಕ್ಷ ರೂ. ನೀಡಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.