-1735999343752.jpeg)
ಅಂಗನವಾಡಿ ಕೇಂದ್ರದ ಮೇಲ್ಚಾವಣಿ ದಿಡೀರ್ ಕುಸಿತ
4th January 2025
ಬಂಗಾರಪೇಟೆ: ತಾಲ್ಲೂಕಿನ ಡಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸರಹೊಸಹಳ್ಳಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿ ದಿಡೀರ್ ಕುಸಿತಗೊಂಡಿದ್ದು,ಅವಶೇಷಗಳ ಅಡಿಯಲ್ಲಿ ಸಿಲುಕಿದ ಮಕ್ಕಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಸದರಿ ಅಂಗನವಾಡಿಯಲ್ಲಿ ೧೩ ವಿದ್ಯಾರ್ಥಿಗಳಿದ್ದು, ಇಂದು ೬ಜನ ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಂತೆಯೆ ಅಂಗನವಾಡಿ ಕಟ್ಟಡವು ಹಳೇಯದಾಗಿದ್ದು, ಮೇಲ್ಚಾವಣಿ ಕುಸಿಯು ಹಂತದಲ್ಲಿತ್ತು. ಇದನ್ನು ಗಮನಿಸದ ಅಂಗನವಾಡಿ ಕಾರ್ಯಕರ್ತೆ ಅದೇ ಕಟ್ಟಡದಲ್ಲಿ ಮಕ್ಕಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರು, ದುರಾದುಷ್ಠವಷಾತ್ ಇದ್ದಕ್ಕಿದ್ದಂತೆ ಮೇಲ್ಚಾವಣಿ ಕುಸಿಯಲಾರಂಬಿಸಿದೆ. ಲಾಸ್ಯ,ಲಿಖಿತ ಒಳಗೊಂಡ0ತೆ ಇನ್ನು ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನಿಬ್ಬರ ವಿದ್ಯಾರ್ಥಿಗಳಿಗೆ ಕಾಲು ತೊಡೆಯ ಭಾಗದಲ್ಲಿ ಮೂಳೆ ಮುರಿದಿದ್ದು, ತಕ್ಷಣ ಸ್ಥಳೀಯರು ಬಂಗಾರಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮೂಳೆ ಮುರಿದಿದ್ದ ಇಬ್ಬರೂ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದೆ.
ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭೇಟಿಕೊಟ್ಟು ಮಕ್ಕಳ ಯೋಗ ಕ್ಷೇಮವನ್ನು ವಿಚಾರಿಸಿ ಮಕ್ಕಳಿಗೆ ಉತ್ತಮ ಚಿಕಿತ್ಸೆಯನ್ನು ನೀಡುವಂತೆ ವೈದ್ಯರಿಗೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ,ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತು ಶಸ್ತç ಚಿಕಿತ್ಸೆ ತಗಲುವ ಎಲ್ಲಾ ವೆಚ್ಚವನ್ನು ಸರ್ಕಾರ ಭರಿಸಲಿದೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ.ಹಾಗೂ ಸಿಡಿಪಿಎಓ ಮುನಿರಾಜು ಅವರಿಗೆ ಎಲ್ಲಾ ಅಂಗನವಾಡಿ ಕಟ್ಟಡಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.ಮಾಹಿತಿ ಬಂದ ನಂತರ, ಶಿಥಿಲಗೊಂಡ ಕಟ್ಟಡಗಳ ದುರಸ್ಥಿಕಾರ್ಯ ಮಾಡಲಾಗುವುದು, ಮತ್ತು ನಿರ್ಲಕ್ಷ ವಹಿಸಿದ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತ್ತು ಪಡಿಸಬೇಕೆಂದು ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿಗಳಾದ ಭಾರತಿ, ಮೂಳೆ ತಜ್ಞ ಸುಧಾಕರ್, ಸಿಡಿಪಿಓ ಮುನಿರಾಜು, ಕೆಡಿಎ ಅಧ್ಯಕ್ಷ ಗೋಪಾಲರೆಡ್ಡಿ,ಪಿಡಿಓ ಭಾಸ್ಕರ್, ಮೊದಲಾದವರು ಇದ್ದರು.

ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ದುರಂತ ಸಾವು
19th December 2024
ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೋಲಾರ ನಗರದ 7ಕ್ಕೂ ಹೆಚ್ಚು ಮಳಿಗೆಗಳಲ್ಲಿ ಸರಣಿ ಕಳ್ಳತನ
19th December 2024
ಕೋಲಾರ: 7ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು, ಮೆಡಿಕಲ್ ಶಾಪ್, ಮಾರ್ಟ್‌ಗಳಲ್ಲಿ ಸರಣಿ ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಕೋಲಾರ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಕೋಲಾರ ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ಶೆಟರ್ ಮುರಿದು ಸರಣಿ ಕಳವು ಮಾಡಲಾಗಿದೆ. ಅಪೊಲೊ ಮೆಡಿಕಲ್ಸ್, ಮೆಡ್ ಪ್ಲಸ್ ಸೇರಿ ದಿನಸಿ ಸಾಮಗ್ರಿ ಮಾರ್ಟ್‌ಗಳಲ್ಲಿ ಕಳವು ಮಾಡಿರುವ ಕಳ್ಳರ ಕೈ ಚಳಕ ಅಂಗಡಿಗಳಲ್ಲಿ ಅಳವಡಿಸಿದ್ದ ಸಿಸಿ ಟಿವಿಗಳಲ್ಲಿ ಸೆರೆಯಾಗಿದೆ. ರಾಡ್‌ನಿಂದ ಮುಂಭಾಗದ ಬಾಗಿಲು ಒಡೆದು ಕಳ್ಳತನ ಮಾಡಿದ್ದಾರೆ.
ಮೆಡ್‌ಪ್ಲಸ್ ಮಳಿಗೆಯಲ್ಲಿದ್ದ 50,000 ನಗದು, ಅಪೊಲೋ ಮೆಡಿಕಲ್ಸ್ನಲ್ಲಿದ್ದ 11,000 ನಗದು ಕದಿಯುವ, ಹಣ ಹುಡುಕಾಟ ನಡೆಸುವ ಎಲ್ಲಾ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ದಿನಸಿ ಮಾರ್ಟ್‌ಗಳ ಕ್ಯಾಶ್ ಬಾಕ್ಸ್‌ನಲ್ಲಿದ್ದ ಸಾವಿರಾರು ರೂ. ಹಣ ಕಳವು ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಬೆರಳಚ್ಚು ತಂಡ ಹಾಗೂ ಶ್ವಾನ ದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಹುಟುಕಾಟಕ್ಕೆ ಮುಂದಾಗಿದ್ದಾರೆ. ಇನ್ನೂ ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನ ಆದಷ್ಟು ಬೇಗ ಪತ್ತೆಹಚ್ಚುವ ಮೂಲಕ ಕೋಲಾರ ನಗರ ಜನರ ಆತಂಕವನ್ನ ದೂರ ಮಾಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.

ಬಂಗಾರಪೇಟೆ: ಅಂತಸ್ತಿನ ಕಟ್ಟಡ ಏಕಾಏಕಿ ಕುಸಿತ
8th November 2024
ಕೋಲಾರ: ಬಂಗಾರಪೇಟೆ ಪಟ್ಟಣದ ಕೆಇಬಿ ರಸ್ತೆಯಲ್ಲಿದ್ದ ಮನೆಯು ಶುಕ್ರವಾರ ಏಕಾಏಕಿ ಕುಸಿದು ಬಿದ್ದಿದೆ.
ಮೂರು ಅಂತಸ್ತಿನ ಕಟ್ಟಡ ಇದಾಗಿದ್ದು, ಮೊದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪಟ್ಟಣದ ಕೆಇಬಿ ರಸ್ತೆಯಲ್ಲಿದ್ದ ಬೂದಿಕೋಟೆ ರಾಜ್ ಕುಮಾರ್ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ.
ಮುಂಜಾನೆ ಕಟ್ಟಡ ವಾಲುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಮೂರು ಕುಟುಂಬಗಳು ನೆಲೆಸಿದ್ದವು.
ಅಲ್ಲದೇ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಬೆಸ್ಕಾಂ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸುತ್ತಮುತ್ತ ಇದ್ದ ಜನರನ್ನು ದೂರ ಕಳುಹಿಸಿದರು.
VIDEO LINK: CLICK
https://youtube.com/shorts/7xgFmf2f_Xs?si=ucOyZE2RSL36uUTH