
6th December 2024
ಡಿ. 9 ರಂದು ವಕ್ಫ್ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ
ಮಂಡ್ಯ ಪ್ರೆಸ್ ನ್ಯೂಸ್
ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಡಿಸೆಂಬರ್ 9ರಂದು ಬೆಳಿಗ್ಗೆ 10.30ಕ್ಕೆ ನಗರದ ಸಿಲ್ವರ್ ಜುಬಿಲಿ ಪಾರ್ಕ್ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಸರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ನಿಂದ ರೈತರ ಕೃಷಿ ಭೂಮಿ, ಸ್ಮಶಾನ, ಸರ್ಕಾರಿ ಆಸ್ತಿ, ಮಠ ಮಂದಿರಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ದೇಶಾದ್ಯಂತ ಕಬಳಿಸಲಾಗುತ್ತಿದ್ದು, ವಕ್ಫ್ನ ಕಾಯ್ದೆಗೆ ತಿದ್ದುಪಡಿ ತಂದು ರೈತ, ಸಾರ್ವಜನಿಕ, ಮಠ-ಮಂದಿರ ಹಾಗೂ ಸರ್ಕಾರಿ ಆಸ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಸದರಿ ಸಮಸ್ಯೆ ಉಂಟಾಗಲು 2013 ರಲ್ಲಿ ಅಂದಿನ ಕೇಂದ್ರ ಸರ್ಕಾರ ತಿದ್ದುಪಡಿ ತಂದು ವಕ್ಫ್ ಮಂಡಳಿಗೆ ಮಿತಿಮೀರಿದ ಅಧಿಕಾರ ನೀಡಿರುವುದರಿಂದಾಗಿ 8000 ಎಕರೆಯಷ್ಟಿದ್ದ ವಕ್ಫ್ ಭೂಮಿ ಇಂದು 9.40 ಲಕ್ಷ ಎಕರೆಗೂ ಹೆಚ್ಚು ವಿಸ್ತಾರವಾಗಿದೆ. ಅಕ್ರಮವಾಗಿ ಆಸ್ತಿ ಹೆಚ್ಚಿಸಿಕೊಳ್ಳುತ್ತಿರುವ ವಕ್ಫ್ಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಒಕ್ಕೂಟದ ಸದಸ್ಯ ಮತ್ತು ಬಜರಂಗ ಸೇನೆಯ ಮಂಜುನಾಥ್ ಮಾತನಾಡಿ, ವಕ್ಫ್ ಕಾಯ್ದೆ ಬಡವ, ಮಾನವೀಯ, ದೇಶ ಹಾಗೂ ಸಂವಿಧಾನ ವಿರೋಧಿಯಾಗಿದೆ. 1913ರಲ್ಲಿ ಬ್ರಿಟಿಷರಿಂದ ರಚನೆಯಾದ ಮುಸಲ್ಮಾನ ಮಂಡಳಿಯು 1923ರಲ್ಲಿ ವಕ್ಫ್ ಮಂಡಳಿಯಾಗಿ ರೂಪಾಂತರಗೊAಡಿದ್ದು, ಇದರ ವಿರುದ್ಧ ಲಂಡನ್ನ ಸುಪ್ರೀಂ ನ್ಯಾಯಾಲಯದಲ್ಲಿ ಕೆಲವು ಬ್ರಿಟಿಷರೇ ದಾವೆ ಹೂಡಿದ್ದರಿಂದ ಲಂಡನ್ನ ಸುಪ್ರೀಂ ನ್ಯಾಯಾಲಯ ವಕ್ಫ್ ಸಾರ್ವಕಾಲಿಕ ಗಂಡಾAತರವಾಗಿದ್ದು ಇದರ ಅಧಿಕಾರವನ್ನು ಮೊಟಕುಗೊಳಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದರು.
ಆಸ್ತಿ ಅಥವಾ ಯಾವುದೇ ರೀತಿಯ ನ್ಯಾಯಕ್ಕಾಗಿ ನ್ಯಾಯಾಲಯಗಳ ಕಡೆಗೆ ಮುಖ ಮಾಡುವುದುಂಟು ಆದರೆ ವಕ್ಫ್ ಸಂಬAಧ ಜಮೀನಿನ ವ್ಯಾಜ್ಯಕ್ಕೆ ಸಂವಿಧಾನ ಬದ್ಧವಾಗಿ ನ್ಯಾಯಾಲಯಗಳ ಮುಂದೆ ಹಾಜರಾಗುವ ಹಕ್ಕನ್ನು ಕಸಿಯುವ ಕೆಲಸವನ್ನು 2013ರಲ್ಲಿ ಅಂದಿನ ಕೇಂದ್ರ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.
ವಕ್ಫ್ನಿಂದ ಅಕ್ರಮವಾಗಿ ಭೂಮಿ ವಶ ಪಡಿಸಿಕೊಳ್ಳುವ ಕಾರ್ಯ ನಿಲ್ಲಬೇಕು. ಈ ನಿಟ್ಟಿನಲ್ಲಿ ಹಾಲಿ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ತರಲಿಚ್ಛಿಸುವ ತಿದ್ದುಪಡಿಗೆ ಸರ್ಕಾರ ಸಮ್ಮತಿ ಸೂಚಿಸಬೇಕು. ಅಥವಾ ಆಂಧ್ರಪ್ರದೇಶ ರಾಜ್ಯದ ಮಾದರಿ ವಕ್ಫ್ನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕದಂಬ ಸೇನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಜೈ ಕರ್ನಾಟಕ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಉಮ್ಮಡಹಳ್ಳಿ ಉಮೇಶ್,ಪಣಕನಹಳ್ಳಿ ವೆಂಕಟೇಶ್, ಪ್ರಕಾಶ್, ಮೋಹನ್ ಚಿಕ್ಕಮಂಡ್ಯ ಇದ್ದರು.
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ