
9th December 2024
ಸ್ವಾಭಿಮಾನಿ ಸಮಾವೇಶ ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ-ಎಂ.ಎಲ್.ಸುರೇಶ್
ಮಂಡ್ಯ ಪ್ರೆಸ್ ನ್ಯೂಸ್
ಮಂಡ್ಯ: ಹಾಸನದಲ್ಲಿ ಡಿಸೆಂಬರ್ 05 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಕೆಪಿಸಿಸಿ ಮತ್ತು ಶೋಷಿತ ವರ್ಗಗಳ ವಿವಿಧ ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದ ಯಶಸ್ಸಿಗೆ ಕಾರಣಕರ್ತ ಮುಖಂಡರು, ಕಾರ್ಯಕರ್ತರು, ಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಭಿಮಾನಿ ಸಮಾವೇಶದಲ್ಲಿ ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ 3 ಲಕ್ಷ ಮಂದಿ ಭಾಗವಹಿಸಿದ್ದು, ಇದು ಹಾಸನ ಇತಿಹಾಸದಲ್ಲಿ ಅಭೂತಪೂರ್ವ ಸಮಾವೇಶವಾಗಿದ್ದು, 2006ರಲ್ಲಿ ಅಹಿಂದ ಸಭೆಯನ್ನು ನಡೆಸಿದ್ದು, ಆ ಸಭೆಗಿಂತಲೂ ಹೆಚ್ಚಿನ ಯಶಸ್ಸನ್ನು ಸದರಿ ಸಭೆ ಕಂಡಿದೆ ಎಂದರು.
ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಸುದ್ದಿ ಹರಡಿಸಲು ಮುಂದಾಗಿದ್ದರ ವಿರುದ್ಧ 2 ತಿಂಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಿ ಸಮಾವೇಶ ನಡೆಸಲು ತೀರ್ಮಾನ ಮಾಡಿದೆವು ಎಂದು ಹೇಳಿದರು.
ಅಂತೆಯೇ ಡಿಸೆಂಬರ್ 20, 21, 22ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಡಿನ ಹಾಗೂ ಜಿಲ್ಲೆಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುರುಬರ ಸಂಘದ ಲೆಕ್ಕ ಪರಿಶೋಧಕ ಮಹೇಶ್, ಕಾಂಗ್ರೆಸ್ ಮುಖಂಡ ವಿಜಯಕುಮಾರ್, ಅಲ್ಪ ಸಂಖ್ಯಾತ ಮುಖಂಡ ಅಮ್ಜದ್ ಪಾಷಾ, ಥಾಮಸ್ ಬೆಂಜಮಿನ್, ಲಿಂಗರಾಜು,ಕೆ.ಸುರೇಶ್ ಹಾಜರಿದ್ದರು.
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ