
9th December 2024
ಸ್ವಾಭಿಮಾನಿ ಸಮಾವೇಶ ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ-ಎಂ.ಎಲ್.ಸುರೇಶ್
ಮಂಡ್ಯ ಪ್ರೆಸ್ ನ್ಯೂಸ್
ಮಂಡ್ಯ: ಹಾಸನದಲ್ಲಿ ಡಿಸೆಂಬರ್ 05 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಕೆಪಿಸಿಸಿ ಮತ್ತು ಶೋಷಿತ ವರ್ಗಗಳ ವಿವಿಧ ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದ ಯಶಸ್ಸಿಗೆ ಕಾರಣಕರ್ತ ಮುಖಂಡರು, ಕಾರ್ಯಕರ್ತರು, ಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಭಿಮಾನಿ ಸಮಾವೇಶದಲ್ಲಿ ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ 3 ಲಕ್ಷ ಮಂದಿ ಭಾಗವಹಿಸಿದ್ದು, ಇದು ಹಾಸನ ಇತಿಹಾಸದಲ್ಲಿ ಅಭೂತಪೂರ್ವ ಸಮಾವೇಶವಾಗಿದ್ದು, 2006ರಲ್ಲಿ ಅಹಿಂದ ಸಭೆಯನ್ನು ನಡೆಸಿದ್ದು, ಆ ಸಭೆಗಿಂತಲೂ ಹೆಚ್ಚಿನ ಯಶಸ್ಸನ್ನು ಸದರಿ ಸಭೆ ಕಂಡಿದೆ ಎಂದರು.
ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಸುದ್ದಿ ಹರಡಿಸಲು ಮುಂದಾಗಿದ್ದರ ವಿರುದ್ಧ 2 ತಿಂಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಿ ಸಮಾವೇಶ ನಡೆಸಲು ತೀರ್ಮಾನ ಮಾಡಿದೆವು ಎಂದು ಹೇಳಿದರು.
ಅಂತೆಯೇ ಡಿಸೆಂಬರ್ 20, 21, 22ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಡಿನ ಹಾಗೂ ಜಿಲ್ಲೆಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುರುಬರ ಸಂಘದ ಲೆಕ್ಕ ಪರಿಶೋಧಕ ಮಹೇಶ್, ಕಾಂಗ್ರೆಸ್ ಮುಖಂಡ ವಿಜಯಕುಮಾರ್, ಅಲ್ಪ ಸಂಖ್ಯಾತ ಮುಖಂಡ ಅಮ್ಜದ್ ಪಾಷಾ, ಥಾಮಸ್ ಬೆಂಜಮಿನ್, ಲಿಂಗರಾಜು,ಕೆ.ಸುರೇಶ್ ಹಾಜರಿದ್ದರು.
6th December 2024
ಡಿ. 9 ರಂದು ವಕ್ಫ್ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ
ಮಂಡ್ಯ ಪ್ರೆಸ್ ನ್ಯೂಸ್
ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಡಿಸೆಂಬರ್ 9ರಂದು ಬೆಳಿಗ್ಗೆ 10.30ಕ್ಕೆ ನಗರದ ಸಿಲ್ವರ್ ಜುಬಿಲಿ ಪಾರ್ಕ್ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಸರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ನಿಂದ ರೈತರ ಕೃಷಿ ಭೂಮಿ, ಸ್ಮಶಾನ, ಸರ್ಕಾರಿ ಆಸ್ತಿ, ಮಠ ಮಂದಿರಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ದೇಶಾದ್ಯಂತ ಕಬಳಿಸಲಾಗುತ್ತಿದ್ದು, ವಕ್ಫ್ನ ಕಾಯ್ದೆಗೆ ತಿದ್ದುಪಡಿ ತಂದು ರೈತ, ಸಾರ್ವಜನಿಕ, ಮಠ-ಮಂದಿರ ಹಾಗೂ ಸರ್ಕಾರಿ ಆಸ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಸದರಿ ಸಮಸ್ಯೆ ಉಂಟಾಗಲು 2013 ರಲ್ಲಿ ಅಂದಿನ ಕೇಂದ್ರ ಸರ್ಕಾರ ತಿದ್ದುಪಡಿ ತಂದು ವಕ್ಫ್ ಮಂಡಳಿಗೆ ಮಿತಿಮೀರಿದ ಅಧಿಕಾರ ನೀಡಿರುವುದರಿಂದಾಗಿ 8000 ಎಕರೆಯಷ್ಟಿದ್ದ ವಕ್ಫ್ ಭೂಮಿ ಇಂದು 9.40 ಲಕ್ಷ ಎಕರೆಗೂ ಹೆಚ್ಚು ವಿಸ್ತಾರವಾಗಿದೆ. ಅಕ್ರಮವಾಗಿ ಆಸ್ತಿ ಹೆಚ್ಚಿಸಿಕೊಳ್ಳುತ್ತಿರುವ ವಕ್ಫ್ಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಒಕ್ಕೂಟದ ಸದಸ್ಯ ಮತ್ತು ಬಜರಂಗ ಸೇನೆಯ ಮಂಜುನಾಥ್ ಮಾತನಾಡಿ, ವಕ್ಫ್ ಕಾಯ್ದೆ ಬಡವ, ಮಾನವೀಯ, ದೇಶ ಹಾಗೂ ಸಂವಿಧಾನ ವಿರೋಧಿಯಾಗಿದೆ. 1913ರಲ್ಲಿ ಬ್ರಿಟಿಷರಿಂದ ರಚನೆಯಾದ ಮುಸಲ್ಮಾನ ಮಂಡಳಿಯು 1923ರಲ್ಲಿ ವಕ್ಫ್ ಮಂಡಳಿಯಾಗಿ ರೂಪಾಂತರಗೊAಡಿದ್ದು, ಇದರ ವಿರುದ್ಧ ಲಂಡನ್‌ನ ಸುಪ್ರೀಂ ನ್ಯಾಯಾಲಯದಲ್ಲಿ ಕೆಲವು ಬ್ರಿಟಿಷರೇ ದಾವೆ ಹೂಡಿದ್ದರಿಂದ ಲಂಡನ್‌ನ ಸುಪ್ರೀಂ ನ್ಯಾಯಾಲಯ ವಕ್ಫ್ ಸಾರ್ವಕಾಲಿಕ ಗಂಡಾAತರವಾಗಿದ್ದು ಇದರ ಅಧಿಕಾರವನ್ನು ಮೊಟಕುಗೊಳಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದರು.
ಆಸ್ತಿ ಅಥವಾ ಯಾವುದೇ ರೀತಿಯ ನ್ಯಾಯಕ್ಕಾಗಿ ನ್ಯಾಯಾಲಯಗಳ ಕಡೆಗೆ ಮುಖ ಮಾಡುವುದುಂಟು ಆದರೆ ವಕ್ಫ್ ಸಂಬAಧ ಜಮೀನಿನ ವ್ಯಾಜ್ಯಕ್ಕೆ ಸಂವಿಧಾನ ಬದ್ಧವಾಗಿ ನ್ಯಾಯಾಲಯಗಳ ಮುಂದೆ ಹಾಜರಾಗುವ ಹಕ್ಕನ್ನು ಕಸಿಯುವ ಕೆಲಸವನ್ನು 2013ರಲ್ಲಿ ಅಂದಿನ ಕೇಂದ್ರ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.
ವಕ್ಫ್ನಿಂದ ಅಕ್ರಮವಾಗಿ ಭೂಮಿ ವಶ ಪಡಿಸಿಕೊಳ್ಳುವ ಕಾರ್ಯ ನಿಲ್ಲಬೇಕು. ಈ ನಿಟ್ಟಿನಲ್ಲಿ ಹಾಲಿ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ತರಲಿಚ್ಛಿಸುವ ತಿದ್ದುಪಡಿಗೆ ಸರ್ಕಾರ ಸಮ್ಮತಿ ಸೂಚಿಸಬೇಕು. ಅಥವಾ ಆಂಧ್ರಪ್ರದೇಶ ರಾಜ್ಯದ ಮಾದರಿ ವಕ್ಫ್ನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕದಂಬ ಸೇನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಜೈ ಕರ್ನಾಟಕ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಉಮ್ಮಡಹಳ್ಳಿ ಉಮೇಶ್,ಪಣಕನಹಳ್ಳಿ ವೆಂಕಟೇಶ್, ಪ್ರಕಾಶ್, ಮೋಹನ್ ಚಿಕ್ಕಮಂಡ್ಯ ಇದ್ದರು.
6th December 2024
ಎಡಿಸಿಗೆ ಜಿಲ್ಲಾ ಕಸಾಪದಿಂದ ಸ್ವಾಗತ
ಮಂಡ್ಯ ಪ್ರೆಸ್ ನ್ಯೂಸ್
ಮಂಡ್ಯ: ನೂತನ ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿರುವ ಬಿ.ಸಿ.ಶಿವಾನಂದ ಮೂರ್ತಿಯವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಹಾಗೂ ಸಮ್ಮೇಳನದ ಸಂಚಾಲಕಿ ಮೀರಾ ಶಿವಲಿಂಗಯ್ಯ, ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ವಿ ಪಣ್ಣೆದೊಡ್ಡಿ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ತಾಲೂಕು ಅಧ್ಯಕ್ಷ ಚಂದ್ರಲಿAಗು, ಸಂಘ ಸಂಸ್ಥೆ ಪ್ರತಿನಿಧಿ ಹೊಳಲು ಶ್ರೀಧರ್,ಸಹಕಾರ್ಯದರ್ಶಿಗಳಾದ ಬಸವೇಗೌಡ ಖರಡ್ಯ, ರಂಗಸ್ವಾಮಿ ಮುಂತಾದವರು ಹಾಜರಿದ್ದರು.
5th December 2024
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷಮೆ ಯಾಚಿಸಲಿ-ಎಸ್.ಆನಂದ್
ಮಂಡ್ಯ ಪ್ರೆಸ್ ನ್ಯೂಸ್
ಮಂಡ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಸಮಾಜದ ಕ್ಷಮೆಯಾಚನೆ ಮಾಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು 12ನೇ ಶತಮಾನದಲ್ಲಿಯೇ ಸಮ ಸಮಾಜದ ನಿರ್ಮಾಣಕ್ಕೆ ಹೋರಾಡಿದ್ದು, ಎಲ್ಲ ರಾಜಕಾರಣಿಗಳು ಅವರ ಹೆಸರು ಬಳಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ. ಅಂತವರಲ್ಲಿ ಯತ್ನಾಳ್ ಕೂಡ ಒಬ್ಬರಾಗಿದ್ದು, ಅವರ ಹೇಳಿಕೆ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತದೆ ಎಂದು ಕಿಡಿ ಕಾರಿದರು.
ಒಂದು ಸಮುದಾಯದವರನ್ನು ಮೆಚ್ಚಿಸಲು ವಿಶ್ವಗುರು ಎಂದು ಖ್ಯಾತಿ ಪಡೆದ ಬಸವಣ್ಣನವರ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಸಮುದಾಯಕ್ಕೆ ಬೇಸರವುಂಟು ಮಾಡಿದ್ದು, ಯತ್ನಾಳ್ ಲಿಂಗಾಯತ ಸಮಾಜದ ಹಾಗೂ ಮನುಕುಲದ ಕ್ಷಮೆಯಾಚಿಸಬೇಕು. ತಮ್ಮ ಅವಿವೇಕತನವನ್ನು ಬಹಿರಂಗವಾಗಿ ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ಕೆ.ಆರ್.ಪೇಟೆ ತಾ.ಅಧ್ಯಕ್ಷ ಸುಜೀಂದ್ರಕುಮಾರ್, ಪಾಂಡವಪುರ ತಾ.ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಜಯಣ್ಣ, ಮಂಡ್ಯ ತಾ.ಅಧ್ಯಕ್ಷ ಗುಳ್ಳಪ್ಪ, ಮಹದೇವಸ್ವಾಮಿ, ಹರೀಶ್ ಇದ್ದರು.
5th December 2024
ಡಿ.6 ರಂದು ಬೃಹತ್ ರಕ್ತದಾನ ಶಿಬಿರ
ಮಂಡ್ಯ: ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಮಹಾಪರಿನಿಬ್ಬಾಣದ ಅಂಗವಾಗಿ ಧಮ್ಮ ವಿಜಯ ಬುದ್ಧ ವಿಹಾರ ಟ್ರಸ್ಟ್,ಜೈ ಭೀಮ್ ಗೆಳೆಯರ ಬಳಗ,ದಸಂಸ,ಮತ್ತು ಭೀಮಸೇನೆ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರವನ್ನು ಡಿಸೆಂಬರ್ 06ರಂದು ಗಾಂಧಿನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ನಿರಂಜನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಪಿ.ರವಿಕುಮಾರ್‌ಗೌಡ, ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಟ ಚೇತನ್ ಅಹಿಂಸಾ, ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ನಗರಸಭಾ ಸದಸ್ಯೆ ಇರ್ಷತ್ ಫಾತಿಮಾ, ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಕಾವ್ಯಶ್ರೀ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ದೀಕ್ಷಿತ್, ಕುಮಾರ್, ಶಿವಶಂಕರಮೂರ್ತಿ, ವೆಂಕಟಾಚಲಯ್ಯ ಇದ್ದರು.