
1st March 2025
ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ತಾಲೂಕು, ಜಿಲ್ಲೆ ಸೇರಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ಜಿಲ್ಲಾ ಉಸ್ತುವಾರಿ ಸಚಿವರ ಗೃಹ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ ಬಿರಾದಾರ್ ಸೇರಿದಂತೆ ಹೊನ್ನಳ್ಳಿ ಗ್ರಾಮದ ಹಿರಿಯರು, ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಬಸವಣ್ಣನವರ ತತ್ವ ಸಿದ್ಧಾಂತದ ಮೇಲೆ ನಡೆಯುತ್ತಿದೆ. ರಾಜ್ಯದಲ್ಲಿ ನುಡಿದಂತೆ ನಡೆಯುವ ಏಕೈಕ ಪಕ್ಷ ಕಾಂಗ್ರೆಸ್. ಚುನಾವಣೆ ಪೂರ್ವದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಲೇ ಈಡೇರಿಸಿದೆ. ಅಭಿವೃದ್ಧಿ ಕಾರ್ಯಗಳ ಜತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮಹಿಳೆಯರು, ದುರ್ಬಲ ವರ್ಗದವರು, ಬಡವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಕೆಲಸ ಮಾಡಲಾಗುತ್ತಿದೆ.
ಕಾಂಗ್ರೆಸ್ ಪಕ್ಷ ದಶಕಗಳ ಇತಿಹಾಸ ಹೊಂದಿದೆ. ದೇಶದ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದಿದೆ. ಇಂತಹ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವರನ್ನು ಕಾಂಗ್ರೆಸ್ ಪಕ್ಷ ಸದಾ ಸ್ವಾಗತಿಸುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಣಮಂತರಾವ ಚವ್ಹಾಣ, ರಾಜು ಬಿರಾದಾರ್, ಉಮಾಕಾಂತ ಬಿರಾದಾರ್, ಡಾ.ಸೋಮಶೇಖರ ಮೈನಾಳೆ ಇದ್ದರು.
ಸೇರ್ಪಡೆಯಾದವರ ವಿವರ : ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಬಿರಾದಾರ್, ಆನಂದ ಸ್ವಾಮಿ, ಬಂಡೆಪ್ಪ ಬಿರಾದಾರ್, ದಿಲೀಪ ಮೈನಾಳೆ, ಕಮಲಾಕರ ಬಿರಾದಾರ್, ಸುಧಾಕರ ದೇಗಲವಾಡೆ, ಸುಧಾಕರ ಬಿರಾದಾರ್, ಸುನಿಲ ಧುಮ್ಮನಸೂರೆ, ಬಲರಾಜ ಬಿರಾದಾರ್, ಪ್ರಭು ಬಿರಾದಾರ್, ಕಲ್ಲಪ್ಪ ಮೇತ್ರೆ, ಸತೀಶ ಮೂಲಗೆ, ಸಹಾದೇವ ಮೇತ್ರೆ, ಬಸವರಾಜ ಏಲ್ಲೂರೆ, ಸಹಾದೇವ ಏಲ್ಲೂರೆ, ವೀರಶೆಟ್ಟಿ ಬಿರಾದಾರ್, ಅನಿಲ ಮೇತ್ರೆ, ಮಲ್ಲಿಕಾರ್ಜುನ ಬಿರಾದಾರ್, ಬಾಬು ಮೈನಾಳೆ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೋಟ್ 01
ತಾಲೂಕಿನ ಹೊನ್ನಳ್ಳಿ ಗ್ರಾಮದ ನೂರಾರು ಹಿರಿಯರು, ಯುವಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿರುವುದು ಸಂತಸ ತರಿಸಿದೆ. ಎಲ್ಲ ಹಿರಿಯರು, ಮುಖಂಡರು ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನರಿಗೆ ಮನುವರಿಕೆ ಮಾಡಿಕೊಟ್ಟು ಗ್ರಾಮೀಣ ಭಾಗದಲ್ಲಿ ಪಕ್ಷ ಬಲಪಡಿಸಬೇಕು.
-ಈಶ್ವರ ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವರು ಬೀದರ್
ಕೋಟ್ 02
ಗಡಿ ಜಿಲ್ಲೆ ಬೀದರ್ ಸೇರಿ ರಾಜ್ಯದ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಕಳೆದ ಎರಡು ದಶಕಗಳಿಂದ ಈಶ್ವರ ಖಂಡ್ರೆ ಅವರು ಶಾಸಕ, ಸಚಿವರಾಗಿ ಜನರ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಸಚಿವ ಈಶ್ವರ ಖಂಡ್ರೆ ಅಭಿವೃದ್ಧಿ ಕಾಳಜಿ ಮೆಚ್ಚಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದೇನೆ.
-ಸುರೇಶ ಬಿರಾದಾರ್ ವಕೀಲರು ಭಾಲ್ಕಿ
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ
'ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು' ಶಿವಶೇಖರ ಸ್ವಾಮಿ ಜಲಾನಯನ ಯಾತ್ರೆ