
25th March 2025
ಬೀದರ. ಮಾ. 24 :- ಬೀದರ್ ಜಿಲ್ಲೆಯ ಬೀದರ್, ಚಿಟಗುಪ್ಪ ಹಾಗೂ ಹುಮನಾಬಾದ್ ತಾಲ್ಲೂಕು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆ ಸುರಿದಿದೆ.
ಬೀದರ್ ನಗರ, ಬೀದರ್ ತಾಲ್ಲೂಕಿನ ಅಮಲಾಪುರ, ಚಿಟ್ಟಾ, ಘೋಡಂಪಳ್ಳಿ, ಗುನ್ನಳ್ಳಿ, ಗೋರನಳ್ಳಿ, ಶಹಾಪುರ, ಜನವಾಡ, ಮರಕಲ್, ಚಿಕ್ಕಪೇಟೆ ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗಿನೊಂದಿಗೆ ಮಳೆ ಆಗಿದೆ.
ಅರ್ಧಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿದಿದ್ದರಿಂದ ನಗರದ ಮನ್ನಳ್ಳಿ ರಸ್ತೆಯ ಬೊಮ್ಮಗೊಂಡೇಶ್ವರ ವೃತ್ತ, ಹಾರೂರಗೇರಿ ಕಮಾನ್ ಬಳಿ ಅಪಾರ ಪ್ರಮಾಣದ ನೀರು ರಸ್ತೆಯ ಮೇಲೆ ಸಂಗ್ರಹಗೊಂಡು ವಾಹನ ಸಂಚಾರಕ್ಕೆ ತೊಡಕಾಯಿತು.
ಸತತ ಮೂರನೇ ದಿನವೂ ಜಿಲ್ಲೆಯಲ್ಲಿ ಮಳೆ ಸುರಿದಿದೆ. ತಾಪಮಾನದಲ್ಲಿ ಭಾರಿ ಇಳಿಕೆಯಾಗಿದ್ದು, ಬೇಸಿಗೆ ಮರೆಸುವಂತೆ ಮಾಡಿದೆ. ಜಿಲ್ಲೆಯಾದ್ಯಂತ ದಿನವಿಡೀ ಮೋಡ ಕವಿದ ವಾತಾವರಣ ಇತ್ತು.
ಕಲಬುರಗಿ:- ನಗರದ ಜಿಲ್ಲಾ ಪಂಚಾಯತ ಅವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಜಿಲ್ಲೆಯ ಭೂಪಾಲ ತೆಗನೂರ ಗ್ರಾಮ ಪಂಚಾಯತ ಅಭಿವದ್ಧಿ ಅಧಿಕಾರಿಯನ್ನು ಕೂಡಲೆ ಕೆಲಸದಿಂದ ವಜಾಗೊಳಿಸವ ಬಗ್ಗೆ ಜಿಲ್ಲಾ ಅಧ್ಯಕ್ಷರಾದ ಅಣವಿರಪ್ಪ ಎಸ್. ಹೆಬ್ಬಾಳ ಅವರ ಸಮುಖದಲ್ಲಿ ಮನವಿ ಪತ್ರ ಸಲ್ಲಿಸಿದ್ದರು .
ಬೊಮ್ಮಗೊಂಡೇಶ್ವರ ಉತ್ಸವದಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿಕೆ ಬೊಮ್ಮಗೊಂಡೇಶ್ವರ ತತ್ವಗಳ ಪ್ರಚಾರ ಆಗಲಿ