
ವಿಧ್ಯಾರ್ಥಿಗಳ ಪ್ರತಿಭೆ ಗುರುತಿಸಿ, ಸ್ಪರ್ಧಾ ಮನೋಭಾವನೆ ಮೂಡಿಸಿ : ಪಿಎಸ್‌ಐ ಅಲಿ
1st April 2025

ಯಾದಗಿರಿ : ಪ್ರಸಕ್ತ ದಿನಗಳಲ್ಲಿ ನಾವೂ ಎಲ್ಲಾ ಕ್ಷೇತ್ರಗಳಲ್ಲಿ ತೀವ್ರ ಸ್ಪರ್ಧೆಯನ್ನು ಕಾಣುತ್ತಿದ್ದೇವೆ, ಕಾರಣ ಗ್ರಾಮೀಣ ಭಾಗದ ಶಿಕ್ಷಕರು ವಿಧ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿ, ಅವರಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಬೇಕು, ಅಂದಾಗ ಮಾತ್ರ ಅವರು ಯಾವುದಾದರೊಂದು ಅವರ ಇಚ್ಚಾಶಕ್ತಿಯ ಕ್ಷೇತ್ರದಲ್ಲಿ ಗುರಿ ಮುಟ್ಟಲು ಸಾಧ್ಯ ಎಂದು ವಡಗೇರಾ ಪೊಲೀಸ್ ಠಾಣೆ ಪಿಎಸ್‌ಐ ಮಹಿಬೂಬ್ ಅಲಿ ಹೇಳಿದರು.
ವಡಗೇರಾ ತಾಲ್ಲೂಕಿನ ಕಂದಳ್ಳಿ ಗ್ರಾಮದ ಸರಕಾರಿ ಕಿರಿಯ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ವಿಧ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರ ಶಿಕ್ಷಣಕ್ಕಾಗಿ ಸಾಕಷ್ಟು ಅನುಕೂಲತೆಗಳನ್ನು ಮಾಡಿಕೊಟ್ಟಿದೆ, ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಿ, ಅದರಿಂದ ಮಾತ್ರ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ಇಂದು ನಾವೇಲ್ಲರೂ ಪರಿಸರ ರಕ್ಷಣೆ ಮಾಡುವುದು ಅವಶ್ಯಕವಾಗಿದೆ, ಶಾಲೆ ಆವರಣದಲ್ಲಿ ನಿವೇಲ್ಲರೂ ಸಸಿ, ಗಿಡ-ಮರಗಳನ್ನು ನೆಟ್ಟಿರುವುದು ನನಗೆ ಸಮಾಧಾನ ತಂದಿದೆ, ಉತ್ತಮ ಪರಿಸರ ನಿರ್ಮಾಣವಾಗಬೇಕು, ಅದು ವಿಧ್ಯಾರ್ಥಿಗಳ ದೈಹಿಕ, ಮಾನಸಿಕ ಅಭಿವೃದ್ಧಿ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾರಂಭದ ನಿಮಿತ್ಯ ವಿಧ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳನ್ನು ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ನೀಡಿ, ಗೌರವಿಸಲಾಯಿತು.
ವೇದಿಕೆ ಮೇಲೆ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಯಂಕಪ್ಪ ನಾಯ್ಕೋಡಿ ಮಾತನಾಡಿ, ಶಾಲೆಯ ವಿಧ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ವೇದಿಕೆ ಮೇಲೆ ಗ್ರಾ.ಪಂ ಅಧ್ಯಕ್ಷ ಕರಿಯಪ್ಪ ಕಂದಳ್ಳಿ, ಶಾಲಾ ಮುಖ್ಯ ಗುರುಗಳಾದ ಮಲ್ಲೇಶಿ ಕುರಿಹಾಳ, ಸಾಬರಡ್ಡಿ ವಡಗೇರಾ, ವಾಸುದೇವ, ಸಾಬಣ್ಣ ತಳಕ್, ಕವಿತಾ ಪಾಟೀಲ್, ಶಾಂತಕುಮಾರ ಬೀದರ, ಮಹಿಪಾಲರಡ್ಡಿ, ಸಿದ್ದಪ್ಪ, ತಿಪ್ಪಣ್ಣ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಂತರ ನಡೆದ ವಿಧ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಗ್ಯಾರಂಟಿ ಯೋಜನೆ ಪ್ರಗತಿಯ ಕಿರುಹೊತ್ತಿಗೆ ಬಿಡುಗಡೆ ಜಿಲ್ಲೆಯ 4 ಲಕ್ಷ ಕುಟುಂಬಗಳಿಗೆ ಅನುಕೂಲ-ಸಚಿವ ತಿಮ್ಮಾಪೂರ