
1st April 2025
ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ಇಲ್ಲಿಯ ತಹಸೀಲ್ ಕಚೇರಿಯಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೆಯ ಜಯಂತ್ಯುತ್ಸವ ಅಂಗವಾಗಿ ಏ.೩ರಂದು ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶಕುಮಾರ ಸಂಗನ್ ತಿಳಿಸಿದ್ದಾರೆ.
ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದ್ದು ತಾಲೂಕಿನ ಎಲ್ಲ ಇಲಾಖೆಗಳ ಅನುಷ್ಟಾನ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಮುಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಏಪ್ರಿಲ್ ಫೂಲ್ ಮಾಡುವ ಬದಲು ಏಪ್ರಿಲ್ ಕೂಲ್ ಮಾಡುವ ವನಸಿರಿ ತಂಡದ ಕಾರ್ಯ ಶ್ಲಾಘನೀಯ....... ಶರಣಬಸಪ್ಪ ಮುಖ್ಯಗುರುಗಳು