Mallamma Nudi

ಬಡ ಮಕ್ಕಳ ಬಾಳು ಬೆಳಗಿದ್ದ ಶಿವಕುಮಾರ ಸ್ವಾಮೀಜಿ

2nd April 2025

News image

ಬೀದರ. ಏ. 01 :- ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅಸಂಖ್ಯಾತ ಬಡ ವಿದ್ಯಾರ್ಥಿಗಳ ಬಾಳು ಬೆಳಗಿದ್ದರು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದರು.

 ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾ ಕನ್ನಡ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತುಮಕೂರಿನ ಡಾ. ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಶಿಕ್ಷಣದಿಂದಲೇ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಹಾಗೂ ಸಶಕ್ತ ರಾಷ್ಟ್ರ ಕಟ್ಟಲು ಸಾಧ್ಯವೆಂದು ಮನಗಂಡಿದ್ದರು. ಬಡ ಮಕ್ಕಳಿಗೆ ತಮ್ಮ ಶಾಲಾ, ಕಾಲೇಜುಗಳಲ್ಲಿ ಊಟ, ವಸತಿ ಸಹಿತ ಉಚಿತ ಶಿಕ್ಷಣ ನೀಡಿದ್ದರು ಎಂದು ಬಣ್ಣಿಸಿದರು.

 ಸಿದ್ದಗಂಗಾ ಮಠದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ದೇಶ, ವಿದೇಶದಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ. ಇಂದು ಅನೇಕ ಶಿಕ್ಷಣ ಸಂಸ್ಥೆಗಳು ಶಿಷ್ಯ ವೇತನದ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಲು ಸಿದ್ಧಗಂಗಾ ಮಠವೇ ಪ್ರೇರಣೆಯಾಗಿದೆ ಎಂದು ತಿಳಿಸಿದರು.

ಸಿದ್ಧಗಂಗಾ ಮಠ ಶತ ಶತಮಾನಗಳಿಂದ ಸಮಾಜೋಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಎಲ್ಲ ಮಠಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

 ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿ ಅವರ ಸಮಾಜ ಸೇವೆಗೆ ಸಾಟಿಯೇ ಇಲ್ಲ. ಅದನ್ನು ಶಬ್ದಗಳಲ್ಲಿ ವರ್ಣಿಸಲು ಆಗುವುದಿಲ್ಲ ಎಂದು ನುಡಿದರು. ಕೇಂದ್ರ ಸರ್ಕಾರ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಅವರಿಗೆ ಪ್ರಶಸ್ತಿ ನೀಡುವುದರಿಂದ ಭಾರತ ರತ್ನದ ಘನತೆ ಹೆಚ್ಚಾಗಲಿದೆ ಎಂದು ಹೇಳಿದರು.

 ಸರ್ಕಾರಿ ಎನ್.ಜಿ.ಒ. ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಬಾಲಾಜಿ ಬಿರಾದಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೀದರ್ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಟಿ.ಎಂ. ಮಚ್ಚೆ ಅವರನ್ನು ಸನ್ಮಾನಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯ ಬಸವರಾಜ ಭತಮುರ್ಗೆ, ನಿವೃತ್ತ ಮುಖ್ಯಶಿಕ್ಷಕ ಸಿದ್ದಾರೆಡ್ಡಿ ನಾಗೋರಾ, ಮುಖಂಡ ನಾಗರಾಜ ಕರ್ಪೂರ, ಪಿಡಿಒ ಚಂದ್ರಕಾಂತ ಫುಲೆ, ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ ಪಾಟೀಲ ಪಾಶಾಪುರ ಮತ್ತಿತರರು ಇದ್ದರು.

 ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ನಿರೂಪಿಸಿದರು. ನಾಗಭೂಷಣ ಹುಗ್ಗೆ ಸ್ವಾಗತಿಸಿದರು. ಬಾದಾಮಿಯ ಶಿಕ್ಷಕ ಸಂಜುಕುಮಾರ ಜಮಾದಾರ್ ವಂದಿಸಿದರು.

Comments
Show comments
ಸಂಬಂಧಿತ ಲೇಖನಗಳು
ಮಲ್ಲಮ್ಮ ನುಡಿ ವಾರ್ತೆ
5th April 2025

ಉದ್ಯೋಗ ಖಾತ್ರಿ ಯೋಜನೆಯ ಕೂಲಿ ದರ 370ಕ್ಕೆ ಹೆಚ್ಚಳ ಸಮಾನ ಕೆಲಸಕ್ಕೆ ಸಮಾನ ಕೂಲಿ ಮಹಿಳಾ ಮತ್ತು ಪುರುಷರಿಗೆ ಸಮಾನ ಕೂಲಿ:

ಮಲ್ಲಮ್ಮ ನುಡಿ ವಾರ್ತೆ
5th April 2025

ಬೇಸಿಗೆ ನಿಮಿತ್ಯ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಜರುಗಿದ ತಾಲೂಕು ಮಟ್ಟದ ಸಭೆ

ಮಲ್ಲಮ್ಮ ನುಡಿ ವಾರ್ತೆ
5th April 2025

ಬಸವ ಧರ್ಮ ಸಂಸತ್ತು ವ್ಯವಸ್ಥಿತವಾಗಿರಲಿ : ಡಿಸಿ ಜಾನಕಿ

ಮಲ್ಲಮ್ಮ ನುಡಿ ವಾರ್ತೆ
5th April 2025

ಪ್ರಜ್ವಲ್‌ಗೆ ರಾಜ್ಯಮಟ್ಟದ ಪ್ರಶಸ್ತಿ

ಮಲ್ಲಮ್ಮ ನುಡಿ ವಾರ್ತೆ
5th April 2025

ಗೊಂದಲದ ಗೂಡಾದ ಸರ್ಕಾರಿ ಶಾಲೆಯ ಎಸ್ ಡಿ ಎಂ ಸಿ ರಚನೆ

ಮಲ್ಲಮ್ಮ ನುಡಿ ವಾರ್ತೆ
5th April 2025

ತುಂಗಭದ್ರಾ ಎಡದಂಡೆ ಕಾಲುವೆ ಮೇಲೆ 24 ತಾಸು ನಿಗಾವಹಿಸಿ- ಪ್ರಾದೇಶಿಕ ಆಯುಕ್ತ ಎಂ.ಸುಂದರೇಶ ಬಾಬು

ಪ್ರಕಾಶಕರು
Ramesh Reddy