
3rd April 2025
ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆೆ,ಎ.2-ಒಗ್ಗಟ್ಟಿನಲ್ಲಿ ಬಲವಿದೆ ಎಂಬ ನಾಣ್ಣುಡಿಯಂತೆ ಸಹಕಾರ ಕ್ಷೇತ್ರದಲ್ಲಿ ಪರಸ್ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಹಕಾರಿ ಸಂಘಗಳು ಹಾಗೂ ಇತರೆ ಹಣಕಾಸು ಸಂಸ್ಥೆಗಳು ಅಭಿವೃದ್ದಿ ಹೊಂದಲು ಸಾಧ್ಯವೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ಜಿಲ್ಲೆಯ ಜಮಖಂಡಿಯ ಎಪಿಎಂಸಿ ಯಾರ್ಡನಲ್ಲಿ ಬುಧವಾರ ಹಮ್ಮಿಕೊಂಡ ದಿ.ಜಮಖಂಡಿ ಅರ್ಬಲ್ ಕೋ-ಆಪ್ ಬ್ಯಾಂಕ್ ಲಿಮಿಟೆಡ್ನ ನೂತನ ಕಟ್ಟಡದ ಉದ್ಘಾಟಿಸಿ ಮಾತನಾಡಿದ ಅವರು ಸಹಕಾರಿ ಸಂಘಗಳು ಹಾಗೂ ಸಹಕಾರಿ ಬ್ಯಾಂಕ್ಗಳು ಗ್ರಾಮೀಣ ಪ್ರದೇಶದ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿವೆ. ಬಾಗಲಕೋಟೆ-ವಿಜಯಪುರ ಅವಳಿ ಜಿಲ್ಲೆಗಳಲ್ಲಿ ಸಹಕಾರಿ ರಂಗ ಪ್ರಗತಿಯಲ್ಲಿದ್ದು, ಅದಕ್ಕಾಗಿ ಶ್ರಮಿಸುತ್ತಿರುವ ಎಸ್.ಆರ್.ಪಾಟೀಲ, ಶಿವಾನಂದ ಪಾಟೀಲ, ಮುರುಗೇಶ ನಿರಾಣಿ, ಅಜಯಕುಮಾರ ಸರನಾಯಕ, ಪ್ರಕಾಶ ತಪಶೆಟ್ಟಿ ಸಹಕಾರಿ ಕ್ಷೇತ್ರವನ್ನು ಮುಂಚೂಣಿಯಲ್ಲಿ ತಂದಿದ್ದಾರೆ ಎಂದರು.
ಸಹಕಾರಿ ತತ್ವದಂತೆ ಹಳ್ಳಿಗೊಂದು ಶಾಲೆ, ಆಸ್ಪತ್ರೆ ಹಾಗೂ ಗ್ರಾಮ ಪಂಚಾಯತಿ ಇರಬೇಕೆಂಬುದುವು ಮಹಾತ್ಮಾಗಾಂಧಿಜಿಯವರ ಕನಸಾಗಿತ್ತು. ಆ ದಿಶೆಯಲ್ಲಿಯೇ ಅವರು ಹಳ್ಳಿಗಳಲ್ಲಿ ನಾಡಿನ ಪ್ರಾಣವಿದೆ ಎಂಬ ಮಾತು ಹೇಳಿದ್ದರು. ಆದ್ದರಿಂದ ಅವಳಿ ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದ್ದರಿಂದ ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಕಾರ್ಖಾನೆಗಳು ಹುಟ್ಟಿಕೊಂಡಿವೆ. ಇದರಿಂದ ರೈತರ, ಕಾರ್ಮಿಕರ ಹಾಗೂ ಸಾರ್ವಜನಿಕರ ಬದುಕಿನಲ್ಲಿ ಬದಲಾವಣೆಯಾಗಿದೆ ಎಂದು ಹೇಳಿದರು.
ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದ ನಮ್ಮ ಸರಕಾರ ಎಲ್ಲ ಜನಾಂಗದ ಹಿತದೃಷ್ಠಿಯಿಂದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ಅನುಕೂಲವಾಗಿದೆ. ಅಲ್ಲದೇ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ನಗರಗಳು ಉನ್ನತೀಕರಣಗೊಂಡಿವೆ. ನಮ್ಮ ನೀರು ನಮ್ಮ ಹಕ್ಕು ಎಂಬ ಆಂದೋಲನದಲ್ಲಿ ಈ ಭಾಗದ ಜೀವನಾಡಿಯಾದ ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯ ಇಂದು ರೈತರ ಪಾಲಿನ ವರದಾನವಾಗಿದೆ. ಇದಕ್ಕೆ ನಾಂದಿ ಹಾಡಿದ ಹಿಂದಿನ ಪ್ರಧಾನಿ ಲಾಲಬಹದ್ದೂರ ಶಾಸ್ತಿçà ಅವರು ಈ ಆಣೆಕಟ್ಟು ನಿರ್ಮಾಣಕ್ಕೆ ಅಡಿಪಾಯ ಹಾಕಿರುವದನ್ನು ಸ್ಮರಿಸಬಹುದಾಗಿದೆ ಎಂದರು.
ಆಲಮಟ್ಟಿ ಆಣೆಕಟ್ಟಿಗೆ ಸಂಬAಧಿಸಿದAತೆ ಇಲ್ಲಿಯವರೆಗೆ ಗೆಜೆಟ್ ಪಾಸ್ ಆಗಿಲ್ಲ. ಅದಕ್ಕಾಗಿ ಅವಳಿ ಜಿಲ್ಲೆ ಶಾಸಕರು, ವಿರೋಧ ಪಕ್ಷದ ನಾಯಕರು ಒತ್ತಾಯ ಮಾಡಿದ್ದು, ಈ ವಿಷಯ ಮುಖ್ಯಮಂತ್ರಿಗಳು ಹಾಗೂ ನಾವು ಗಂಭಿರವಾಗಿ ಪರಿಗಣಿಸಿದ್ದೇವೆ. ಶತಾಯ ಗತಾಯ ಆಲಮಟ್ಟಿ ಜಲಾಶಯ ಎತ್ತರವನ್ನು 524 ಮೀಟರಗೆ ಎತ್ತರಿಸುವದರ ಜೊತೆಗೆ ಸಂತ್ರಸ್ತರಿಗೆ ಹಾಗೂ ಈ ಭಾಗದ ಎಲ್ಲ ರೈತರ ಕನಸು ನನಸಾಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು ಗೆಜೆಟ್ ನೋಟಿಪಿಕೇಷನ್ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಅದಕ್ಕಾಗಿ 22 ಸಾವಿರ ಕೋಟಿ ರೂ. ನಿಗದಿ ಮಾಡಲಾಗಿದೆ. 5 ವರ್ಷಕ್ಕೆ 2 ಲಕ್ಷ ಕೋಟಿ ರೂ. ಬೇಡಿಕೆ ಇದೆ. ಆದರೆ ಆ ಕಾರ್ಯವಾಗಿಲ್ಲ. ಕಾರಣ 5 ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಬೇಕಾಗಿರುವದರಿAದ ಮುಂದಿನ ದಿನಗಳಲ್ಲಿ ಕಾರ್ಯರೂಪ ತರಲು ಸರಕಾರ ಬದ್ದವಾಗಿದೆ ಎಂದರು.
ಅಥಣಿ ಶಾಸಕ ಲಕ್ಷö್ಮಣ ಸವದಿ ಮಾತನಾಡಿ, ಅಂದು ಸಹಕಾರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ ಅವರು ಅಪೆಕ್ಸ ಬ್ಯಾಂಕ್ ಮೂಲಕ ಸಾಕ್ಷಷ್ಟು ಸಹಾಯ ಮಾಡಿದ್ದರಿಂದ ನಮ್ಮ ಭಾಗಗಳಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಬೆಳೆಯಲು ಸಾಧ್ಯವಾಯಿತು ಎಂದರು.
ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾತನಾಡಿ ಸಹಕಾರ ಚಳುವಳಿ ಪ್ರಾರಂಭವಾಗಿದ್ದು, ಕರ್ನಾಟಕದಲ್ಲಿ ಆದರೆ ಬೆಳೆದಿದ್ದು ಮಾತ್ರ ಮಹಾರಾಷ್ಟçದಲ್ಲಿ ಭವಿಷ್ಯದಲ್ಲಿ ಮುಖ್ಯಮಂತ್ರಿಯಾದರೆ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುವಿರೆಂದು ನಂಬಿದ್ದೇವೆ ಎಂದರು.
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಪ್ರವೇಶಿಸಿದವರು ಇಂದು ರಾಜಕೀಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ. ಇದರಿಂದ ಸಹಕಾರಿ ಕ್ಷೇತ್ರದಲ್ಲಿ ಎಷ್ಟೊಂದು ಶಕ್ತಿ ಎಂದು ತಿಳಿದುಕೊಳ್ಳಬಹುದಾಗಿದೆ ಎಂದರು.
ಪ್ರಾರಂಭದಲ್ಲಿ ಜಮಖಂಡಿ ಅರ್ಬನ್ ಕೋ-ಆಪ್ ಬ್ಯಾಂಕ್ನ ಆದ್ಯಕ್ಷ ರಾಹುಲ್ ಕಲೂತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಲ್ಲಾಪೂರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು, ಜಮಖಂಡಿ ಮುತ್ತಿನ ಕಂತಿ ಹಿರೇಮಠದ ಶಿವಲಿಂಗ ಶಿವಾಚಾರ್ಯರು, ಕಲ್ಯಾಣ ಮಠದ ಗೌರಿಶಂಕರ ಸ್ವಾಮಿಗಳು ಸಾನಿದ್ಯವಹಿಸಿದ್ದರು. ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಮಾಜಿ ಸಚಿವರಾದ ಎಸ್.ಆರ್.ಪಾಟೀಲ, ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಆನಂದ ನ್ಯಾಮಗೌಡ, ಶ್ರೀಕಾಂತ ಕುಲಕರ್ಣಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆ ಪ್ರಗತಿಯ ಕಿರುಹೊತ್ತಿಗೆ ಬಿಡುಗಡೆ ಜಿಲ್ಲೆಯ 4 ಲಕ್ಷ ಕುಟುಂಬಗಳಿಗೆ ಅನುಕೂಲ-ಸಚಿವ ತಿಮ್ಮಾಪೂರ