
17th June 2024
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೂ ಗ್ರಾಸವಾಗಿದೆ. ಈ ಮಧ್ಯೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ಸತ್ಯ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿ ಎಂದು ಹೇಳಿದರು. ಚಿತ್ರರಂಗದಿಂದ ದರ್ಶನ್ ಬ್ಯಾನ್ ಕುರಿತಂತೆ ಪ್ರತಿಕ್ರಿಯಿಸಿದ ಸುದೀಪ್, ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಹಿರಿಯರು ಕಟ್ಟಿ ಬೆಳೆಸಿದ ಚಿತ್ರರಂಗ ಯಾರೋ ಒಬ್ಬರಿಂದ ಹಾಳಾಗಬಾರದು. ಆರೋಪದಿಂದ ಮುಕ್ತವಾಗಿ ಹೊರಬಂದ ಮೇಲೆ ಬ್ಯಾನ್ ಮಾಡಿದರೆ ಪ್ರಯೋಜನವೇನು? ಬ್ಯಾನ್ ಮಾಡುವುದಕ್ಕಿಂತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ನಾನು ಯಾರ ಪರವೂ ಇಲ್ಲ. ವಿರುದ್ಧವೂ ಇಲ್ಲ. ನಾನು ನ್ಯಾಯದ ಪರ ಇದ್ದೇನೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
17th June 2024
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.
ನಿನ್ನೆ ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಾದ ವಿವಾದದಲ್ಲಿ ದರ್ಶನ್ ಮತ್ತು ಗ್ಯಾಂಗ್ ರೇಣುಕಾ ಸ್ವಾಮಿಗೆ ನೀಡಿದ್ದ ರಾಕ್ಷಸ ರೀತಿಯ ಚಿತ್ರಹಿಂಸೆಯ ವಿವರ ಹೊರಬಿದ್ದಿದೆ.
ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ ಒಂಬತ್ತು ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು, ಈ ಹಂತದಲ್ಲಿ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿ, ನ್ಯಾಯಾಲಯದ ಗಮನಕ್ಕೆ ತಂದ ಅಂಶವೆಂದರೆ ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂಬುದು.
ನ್ಯಾಯಾಲಯದಲ್ಲಿ ದರ್ಶನ್ ಹಾಗೂ ಗ್ಯಾಂಗ್?ನ ಕ್ರೂರತೆಯ ಬಗ್ಗೆ ಸಣ್ಣ ಸುಳಿವೊಂದನ್ನು ನೀಡಿದ ಹಿರಿಯ ವಕೀಲ ಪ್ರಸನ್ನ ಕುಮಾರ್ ಅವರು ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಯಸಿದ ಮೆಗರ್ ಯಂತವನ್ನು ಸಹ ವಶಪಡಿಸಿಕೊಳ್ಳಬೇಕಿದೆ
ಮೈಮೇಲಿದ್ದ ಚಿನ್ನಾಭರಣ ದೋಚಿದ್ದ ಗ್ಯಾಂಗ್
ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಆತನ ಮೈಮೇಲಿದ್ದ ಒಡವೆಗಳನ್ನೂ ದೋಚಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ರೇಣುಕಾಸ್ವಾಮಿ ಬರ್ಬರ ಕೊಲೆಯ ಬಳಿಕ ಅವರ ಮೈಮೇಲಿದ್ದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಪೊಲೀಸರ ತನಿಖೆ ವೇಳೆ ಈ ಸ್ಫೋಟಕ ಮಾಹಿತಿಯನ್ನು ಆರೋಪಿ ರವಿ ಬಾಯ್ದಿಟ್ಟಿದ್ದಾನೆ. ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಆರೋಪಿ ಜಗ್ಗ ದೋಚಿದ್ದಾನೆ ಎಂದು ಪೊಲೀಸರ ಮುಂದೆ ರವಿ ಸತ್ಯ ಬಾಯಿ ಬಿಟ್ಟಿದ್ದಾನೆ.
ಸುಮ್ಮನಹಳ್ಳಿ ಬಳಿ ರೇಣುಕಾಸ್ವಾಮಿ ಶವವನ್ನ ಎಸೆದು ಬಳಿಕ ಪೊಲೀಸ್ ಠಾಣೆಗೆ ಶರಣಾಗುವಂತೆ ಹೇಳಿದರು. ಆದರೆ ಭಯದಿಂದ ಠಾಣೆಗೆ ಹೋಗದೆ ಕಾರಿನಲ್ಲಿ ಚಿತ್ರದುರ್ಗಕ್ಕೆ ಬಂದೆ. ಕಾರಿನಲ್ಲಿ ಜಗ್ಗನ ಜೊತೆ ಚಿತ್ರದುರ್ಗಕ್ಕೆ ಬಂದುಬಿಟ್ಟೆ. ಆರೋಪಿ ಜಗ್ಗ ಚಿನ್ನಾಭರಣ ತೆಗೆದುಕೊಂಡು ಬಂದಿದ್ದ ಎಂದು ರವಿ ಹೇಳಿದ್ದಾನೆ.
ಎಂದು ಮಾಹಿತಿ ನೀಡಿದ್ದರು. ಅಲ್ಲದೆ, ಮೈಸೂರಿನಲ್ಲಿ ಕೆಲವು ಕಡೆ ಆರೋಪಿಯೊಟ್ಟಿಗೆ ಮಹಜರು ಮಾಡಬೇಕಿದೆ. ಆರೋಪಿಯ ಬಟ್ಟೆ ಹಾಗೂ ಚಪ್ಪಲಿಗಳನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಸಹ ವಾದಿಸಿದ್ದಾರೆ.
ರೇಣುಕಾಸ್ವಾಮಿ ಅವರ ಶವದ ಗುರುತು ಸಿಗದಂತೆ ಮಾಡಲು 30 ಲಕ್ಷ ರೂಪಾಯಿ ಆಮಿಷ ಒಡ್ಡಲಾಗಿತ್ತು. ಇದನ್ನು ವಶಪಡಿಸಿಕೊಳ್ಳಲಾಗಿದೆ. 10 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಿಡಿಯನ್ನು ನ್ಯಾಯಾಲಯ ಪರಿಶೀಲಿಸಬಹುದಾಗಿದೆ.