Malnad Vani
News

ಭೂಕುಸಿತದಿಂದ ತತ್ತರಗೊಂಡಿದ್ದ ಪಪುವಾ ನ್ಯೂಗಿನಿಗೆ ಭಾರತದಿಂದ ನೆರವು ರವಾನೆ

17th June 2024

ನವದೆಹಲಿ: ಭಾರಿ ಪ್ರಮಾಣದ ಭೂಕುಸಿತಕ್ಕೆ ಒಳಗಾಗಿದ್ದ

ಪಪುವಾ ನ್ಯೂಗಿನಿಗೆ ಭಾರತದಿಂದ ನೆರವು ರವಾನಿಸಲಾಗಿದೆ. ವಿಮಾನದ ಮೂಲಕ 8.35 ಕೋಟಿ ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲಾಗಿದೆ.ತಾತ್ಕಾಲಿಕ ಆಶಯಕ್ಕೆ ಅಗತ್ಯವಾದ ವಸ್ತುಗಳು, ನೀರಿನ ಟ್ಯಾಂಕ್‌ಗಳು, ನೈರ್ಮಲ್ಯ ಕಿಟ್‌ಗಳು ಮತ್ತು ತಿನ್ನಲು ಸಿದ್ಧವಾಗಿರುವ ಊಟ ಸೇರಿದಂತೆ 13 ಟನ್‌ಗಳಷ್ಟು ವಿಪತ್ತು ಪರಿಹಾರ ಸಾಮಗ್ರಿ ಒಳಗೊಂಡಂತೆ ಸರಿಸುಮಾರು ಟನ್‌ಗಳಷ್ಟು 19 ಟನ್‌ಗಳಷ್ಟು ಸಾಮಗ್ರಿಗಳನ್ನು ಕಳುಹಿಸಲಾಗಿದೆ.

ಇದರೊಂದಿಗೆ 6 ಟನ್‌ ಗಳಷ್ಟು ತುರ್ತು ಬಳಕೆಯ ಔಷಧ. ಡೆಂಗ್ಯೂ ಮತ್ತು ಮಲೇರಿಯಾ ರೋಗನಿರ್ಣಯದ ಕಿಟ್‌ಗಳು ಸೇರಿದಂತೆ ವೈದ್ಯಕೀಯ ಉಪಕರಣಗಳು ಮತ್ತು ಮಗುವಿಗೆ ನೀಡುವ ಆಹಾರ ಪೂರೈಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಳೆದ ಮಾರ್ಚ್‌ನಲ್ಲಿ ಪಪುವಾ ನ್ಯೂಗಿನಿಯಲ್ಲಿ ಭೂಕುಸಿತ ಭೂಕುಸಿತ ಸಂಭವಿಸಿ 2 ಸಾವಿರಕ್ಕೂ ಅಧಿಕ ಜನರು ಭೂ ಸಮಾಧಿಯಾಗಿದ್ದರು. ರಾಷ್ಟ್ರವು ಅಪಾರ ಪ್ರಮಾಣದ ಆರ್ಥಿಕ ನಷ್ಟಕ್ಕೆ ಒಳಗಾಗಿತ್ತು. ಹೀಗಾಗಿ ವಿಶ್ವಸಂಸ್ಥೆಯ ಮೂಲಕ

ಅಂತರರಾಷ್ಟ್ರೀಯ ನೆರವನ್ನು ಪಪುವಾ ಸರ್ಕಾರ ಕೋರಿತ್ತು. ಅದರ ಭಾಗವಾಗಿ ಭಾರತ ವಿಪತ್ತು ನೆರವನ್ನು ರವಾನಿಸಿದೆ.

News

ಪಹಣಿಗೆ ಆಧಾರ್ ಜೋಡಣೆಯಲ್ಲಿ ರಾಜ್ಯದಲ್ಲಿ ಜಿಲ್ಲೆಗೆ 3 ನೇ ಸ್ಥಾನ, ಶೇ 80 ಕ್ಕಿಂತ ಹೆಚ್ಚು ಸಾಧನೆ ಮಾಡಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸನ್ಮಾನ

17th June 2024

ದಾವಣಗೆರೆ: ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾ‌ರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‌ನ್ನು ಪಹಣಿಗೆ ಜೋಡಿಸಿದ್ದು ಇದು ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಶನಿವಾರ ಆನಗೋಡು ಬಳಿಯ ಸೈನ್ಸ್‌ ಭವನದಲ್ಲಿ ನಡೆದ ಜಿಲ್ಲೆಯ ಕಂದಾಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. 425708 ಖಾತೆದಾರರ ಆಧಾರ್ ಜೋಡಣೆ ಮಾಡಲಾಗಿದೆ. ಮರಣ. 109955 0 535663 ಆಧಾರ್ ಜೋಡಣೆ ಮಾಡುವ ಮೂಲಕ ಶೇ 64.73 ರಷ್ಟು ಆಧಾರ್ ಜೋಡಣೆ ಮಾಡಲಾಗಿದೆ. ಶೇ 80 ರಷ್ಟು ಆಧಾರ್ ಜೋಡಣೆ ಮಾಡಲಾದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಭೆಯಲ್ಲಿ ಸನ್ಮಾನಿಸಲಾಯಿತು.

ಕೆಲವು ಖಾತೆದಾರರ ಮೂಲ ಮಾಲಿಕರು ಮರಣ ಹೊಂದಿದ್ದು ಅವರ ಹೆಸರಿನಲ್ಲಿಯೇ ಪಹಣಿ ಚಾಲ್ತಿಯಲ್ಲಿರುತ್ತವೆ. ಮುಂದಿನ ದಿನಗಳಲ್ಲಿ ಪೌತಿ ಖಾತೆ ಆಂದೋಲನವನ್ನು ಕೈಗೊಳ್ಳುವ ಮೂಲಕ ಖಾತೆ ಬದಲಾವಣೆ ಮಾಡಿ ಪಹಣಿಗೆ

ಆಧಾರ್ ಜೋಡಣೆಯ ಕೆಲಸವನ್ನು ಕೈಗೆತ್ತಿಕೊಳ್ಳಬೇಕೆಂದು ತಿಳಿಸಿದರು.

ಸರ್ಕಾರಿ ಜಾಗ ತಡೆಗೆ ಲ್ಯಾಂಡ್‌ಬಿಟ್; ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸಿ ಜಿಯೋ ಫೆನ್ಸಿಂಗ್ ಮಾಡುವ ಕೆಲಸ ಪ್ರಗತಿಯಲ್ಲಿದ್ದು ಜಿಲ್ಲೆಯಲ್ಲಿ 19408 ಸರ್ಕಾರದ ಆಸ್ತಿಗಳನ್ನು ಗುರುತಿಸಲಾಗಿದೆ. ಇದರಲ್ಲಿ ಹರಿಹರ 2599. ಜಗಳೂರು 2662. ದಾವಣಗೆರೆ 5664. ಹೊನ್ನಾಳಿ 2482. ಚನ್ನಗಿರಿ 3672. ನ್ಯಾಮತಿ 2329 ಆಸ್ತಿಗಳಿವೆ. ಇದರಲ್ಲಿ 10956 ಆಸ್ತಿಗಳನ್ನು ಗುರುತಿಸಿ ಜಿಯೋ ಫೆನ್ಸಿಂಗ್ ಮಾಡಲಾಗಿದೆ. ಉಳಿದ 8452 ಆಸ್ತಿಗಳನ್ನು ರಕ್ಷಣೆ ಮಾಡಲು ತಿಳಿಸಿದರು.

ಇ-ಆಫೀಸ್; ಕಂದಾಯ ಇಲಾಖೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಾಲ್ಲೂಕು ಕಚೇರಿ ಸೇರಿದಂತೆ ಎಲ್ಲಾ ಹಂತದಲ್ಲಿ ಆಡಳಿತವನ್ನು ಇ-ಕಚೇರಿ ಮೂಲಕವೇ ನಿರ್ವಹಣೆ ಮಾಡಲಾಗುತ್ತಿದೆ. ಜೂನ್ 13ರವರೆಗೆ 225952 ಅರ್ಜಿಗಳನ್ನು ಸ್ವೀಕರಿಸಿ 220847

ಅರ್ಜಿಗಳನ್ನು ಕ್ರಮಕ್ಕಾಗಿ ಕಳುಹಿಸಿದ್ದು 16428 ಕಳುಹಿಸಲು ಬಾಕಿ ಮತ್ತು 63399 ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದೆ. ಕಡತಗಳಲ್ಲಿ 25391 ಕಡತ ತೆರೆಯಲಾಗಿದ್ದು ಒಟ್ಟು 74709 ಸ್ವೀಕರಿಸಿ ಮುಂದಿನ ಹಂತಕ್ಕೆ ಕಳುಹಿಸಲಾಗಿದೆ. ಇದರಲ್ಲಿ 9621 ಬಾಕಿ, 12643 ಇತ್ಯರ್ಥ ಮಾಡಿದ್ದು 2062 ಪ್ರಗತಿಯ ಹಂತದಲ್ಲಿವೆ.

ಕಂದಾಯ ಗ್ರಾಮ; ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಲು 81 ಪ್ರಸ್ತಾವನೆಗಳಿದ್ದು ಇವುಗಳಲ್ಲಿ ಈಗಾಗಲೇ 35 ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಇನ್ನುಳಿದ ಗ್ರಾಮಗಳನ್ನು ಆದಷ್ಟು ಬೇಗನೆ ಅಧಿಸೂಚನೆ ಹೊರಡಿಸಲು ಕ್ರಮಕೈಗೊಳ್ಳಲು ಸೂಚನೆ ನೀಡಿದರು.

ಕೆರೆಗಳ ಒತ್ತುವರಿ ತೆರವು; ಜಿಲ್ಲೆಯಲ್ಲಿ 538 ಕೆರೆಗಳಿದ್ದು 23292 ಎಕರೆ ಪ್ರದೇಶ ವಿಸ್ತೀರ್ಣ ಹೊಂದಿರುತ್ತದೆ. ಇದರಲ್ಲಿ 486 ಕೆರೆಗಳ ಅಳತೆ ಮಾಡಿ 16604.22 ಎಕರೆ ವಿಸ್ತೀರ್ಣ ಗುರುತಿಸಲಾಗಿದೆ. ಅಳತೆ ಮಾಡಲು 52 ಕೆರೆಗಳಿಂದ 6687.24 ಎಕರೆ ಅಳತೆಗೆ ಬಾಕಿ ಇರುತ್ತದೆ. ಅಳತೆ ಮಾಡಿದ 283 ಕರೆಗಳಲ್ಲಿ 1816.39 ಎಕರೆ ಒತ್ತುವರಿ ಪ್ರದೇಶವೆಂದು ಗುರುತಿಸಿ 37 ಕೆರೆಗಳ 66.38 ಎಕರೆ ವಿಸ್ತೀರ್ಣ ತೆರವು ಮಾಡಲಾಗಿದೆ. ಇನ್ನೂ 246 ಕೆರೆಗಳ 1750 ಎಕರೆ ವಿಸ್ತೀರ್ಣ ತೆರವಿಗೆ ಬಾಕಿ ಇದ್ದು 203 ಕೆರೆಗಳು 14787 ಎಕರೆ ವಿಸ್ತೀರ್ಣದಲ್ಲಿದ್ದು ಯಾವುದೇ ಒತ್ತುವರಿಯಾಗಿರುವುದಿಲ್ಲ. ಒತ್ತುವರಿಯಾದ ಕೆರೆಗಳನ್ನು ಶೀಘ್ರದಲ್ಲಿ ತೆರವು ಮಾಡಲು ಕ್ರಮ ಕೈಗೊಳ್ಳಲು ನೀಡಿದರು. ಸೂಚನೆ

News

ತಪ್ಪು ಯಾರೇ ಮಾಡಿದರೂ ರಕ್ಷಿಸುವ ಮಾತೇ ಇಲ್ಲ : ಶಾಸಕ ವೀರೇಂದ್ರ ಪಪ್ಪಿ

17th June 2024

ಚಿತ್ರದುರ್ಗ : ತಪ್ಪು ಯಾರೇ ಮಾಡಿದರು ರಕ್ಷಿಸುವ ಮಾತೇ ಇಲ್ಲ. ಈ ನೆಲದ ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆ ಉತ್ತಮವಾಗಿ ನಡೆಯುತ್ತಿದೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ' ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ನಟ ದರ್ಶನ್ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ವಿಆರ್‌ಎಸ್ ಬಡಾವಣೆಯ ನಿವಾಸಕ್ಕೆ ಭೇಟಿ ಮಾಡಿದ ಶಾಸಕ ವಿರೇಂದ್ರ ಪಪ್ಪಿ ತಂದೆ. ತಾಯಿ, ಪತ್ನಿಗೆ ಸಾಂತ್ವನ ಹೇಳಿದ ನಮತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರೇಣುಕಾ ಸ್ವಾಮಿಯ ಕೊಲೆಯ ಸಂಗತಿ ತಿಳಿದು ಮನಸ್ಸಿಗೆ ತುಂಬಾ ನೋವಾಯಿತು. ಕುಟುಂಬದವರಿಗೆ ಸಾಂತ್ವನ

ಹೇಳಿ ವೈಯಕ್ತಿಕ ಸಹಾಯ ಮಾಡಿದ್ದೇನೆ. ಶಿವಗಣಾರಾಧನೆ ಕಾರ್ಯ ಮುಗಿದ ಕೂಡಲೇ

ಮುಖ್ಯಮಂತ್ರಿಸಿದ್ದರಾಮಯ್ಯ ಅವರನ್ನು ಕುಟುಂಬಕ್ಕೆ ಭೇಟಿ ಮಾಡಿಸುವ ಕಾರ್ಯ ಮಾಡುತ್ತೇನೆ'

ಎಂದರು.

'ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಕುರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜತೆ ಚರ್ಚೆ ನಡೆಸಲಾಗುವುದು. ಇಡೀ ಕುಟುಂಬದ ಜತೆ ನಾವಿದ್ದೇವೆ' ಎಂದು ತಿಳಿಸಿದರು.

'ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನ ಜೀವ ತೆಗೆಯುವ ಮಟ್ಟಕ್ಕೆ ಹೋಗಬಾರದು. ಇಂತಹ ಪ್ರಯತ್ನ ಯಾರು ಮಾಡಬಾರದು. ಜನನಾಯಕರು, ಅಭಿಮಾನಿ ವರ್ಗ ಹೊಂದಿರುವವರು ಆದರ್ಶರಾಗಿರಬೇಕು. ಇಂತಹ ಹೀನ ಕೆಲಸ ಮಾಡಿದಾಗ ಬೇಲಿಯೇ ಎದ್ದು ಹೊಲ ಮೇದಂತೆ ಆಗುತ್ತದೆ' ಎಂದರು.

News

ಬದುಕಿನಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ : ಶಾಸಕ ಬಸವಂತಪ್ಪ

17th June 2024

ದಾವಣಗೆರೆ: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವುದರೊಂದಿಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಬೆಳೆಸಿಕೊಳ್ಳಬೇಕೆದು ಶಾಸಕ ಕೆ. ಎಸ್‌.ಬಸವಂತಪ್ಪ ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮರಬನಹಳ್ಳಿ ಗ್ರಾಮದಲ್ಲಿ ಭಾನುವಾರ ಬಸವಾಪಟ್ಟಣದ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕ-1 ಮತ್ತು 2 ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಬದುಕಿನ ಸಾಮರಸ್ಯ ಬೆಳೆಯಲು ಎನ್‌ಎಸ್ಎಸ್ ಶಿಬಿರ ಯುವಕರಿಗೆ ಪೂರಕವಾಗಿದೆ.

10-00-8004 on 10-00- ಸಿಖರ ನಾಯಿಯ ಸ್ಥಳ : ಮರಬನಹಳ್ಳಿ, ಚೆನ್ನಗಿರಿ ತಾ, ದಾವಣಗರೇಟು,

ರಾಷ್ಟ್ರಪ್ರೇಮ, ದೇಶಭಕ್ತಿ ಬೆಳೆಯುತ್ತದೆ. ವೈಜ್ಞಾನಿಕ ಚಿಂತನೆಗಳ ಕುರಿತು ಚರ್ಚಿಸಬಹುದು. ಯುವ ಜನತೆ ದಾರಿ ತಪ್ಪದಂತೆ ಮಾರ್ಗದರ್ಶನ ನೀಡುತ್ತದೆ. ವಿದ್ಯಾರ್ಥಿಗಳು ದೇಶದ ಆರ್ಥಿಕ ಭದ್ರತೆ ಕುರಿತು ವಿಶ್ಲೇಷಣೆ ಮಾಡುವ ಎಲ್ಲಾ ಅವಕಾಶಗಳನ್ನು ಈ ವಿಶೇಷ ಶಿಬಿರ ಕಲ್ಪಿಸುತ್ತದೆ. ಇದನ್ನು ಯುವ ಜನತೆ ಮೈಗೂಡಿಸಿಕೊಂಡರೆ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಲು

ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು.

ನಮ್ಮ ಜೀವನದಲ್ಲಿ ಶಿಕ್ಷಣ ಮಾತ್ರ ಮುಖ್ಯವಲ್ಲ, ಶಿಕ್ಷಣದೊಂದಿಗೆ ಬದು- ಕಿಗೆ ಪೂರಕವಾದ ಅಂಶಗಳು ಬಹುಮುಖ್ಯ ಎನ್‌ಎಸ್‌ಎಸ್ ಶಿಬಿರದಿಂದ ಬದುಕಿಗೆ ಪೂರಕವಾದ ಶಿಕ್ಷಣವನ್ನು ಪಡೆಯಬಹುದು ಎಂದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.

ಆ‌ರ್.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ, ಗ್ರಾಮದ ಮುಖಂಡ ಶಂಕರಪಾಟೀಲ್, ಪ್ರಭಾಕರ್.ರಮೇಶ್, ಗ್ರಾಪಂ ಸದಸ್ಯರಾದ ರವಿಕುಮಾ‌ರ್. ಹನುಮಂತಪ್ಪ, ರೇವಣ್ಣ, ಎಸ್‌ಡಿಎಂಸಿ ಅಧ್ಯಕ್ಷ ದುರುಗೇಶ್.ಕೆಎಂಎಫ್ ಸದಸ್ಯ ಕಂಚುಗಾರನಹಳ್ಳಿ ಬಸಣ್ಣ, ಶಿಬಿರಾಧಿಕಾರಿ ಎಂ.ಡಿ.ಬಸವರಾಜ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

News

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

17th June 2024

ವಿಜಯಪುರ: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19 ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ : ಚುನಾವಣೆಯಲ್ಲಿ

ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದರು.

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ : ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ.11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.

ಗಳಿದೆ. ಆಂಧ್ರದ ಅನಂತಪುರದಲ್ಲಿ 109.44. ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ. ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮದರ ಕಡಿಮೆ ಇದೆ ಎಂದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ

ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ

ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಹಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ತಲೆಬದ್ದಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.

ಅನುದಾನ ನೀಡಲಾಗಿದೆ:ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅನುದಾನವನ್ನು ನೀಡಲಾಗಿದೆ ಎಂದರು.

ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ :

ಸಾರ್ವಜನಿಕರಲ್ಲಿ ಗ್ಯಾರಂಟಿ ಗಳನ್ನು ನಿಲ್ಲಿಸುತ್ತಾರೆ ಎಂಬ ಗಾಳಿಸುದ್ದಿ ಎದ್ದಿರುವ ಬಗ್ಗೆ ಮಾತನಾಡಿ ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ ಎಂದರು.

News

ದರ್ಶನ್‌ಗೆ ಐಷಾರಾಮಿ ಸೇವೆ ಆರೋಪ, ಅನ್ನಪೂರ್ಣೇಶ್ವರಿ ನಗರ ಠಾಣೆ ಸುತ್ತ ಶಾಮಿಯಾನ

13th June 2024

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಹಾಗೂ ಇತರರನ್ನು ಅನ್ನಪೂರ್ಣೇಶ್ವರಿನಗರ ಠಾಣೆಯ ಕಟ್ಟಡದಲ್ಲಿ ಇರಿಸಲಾಗಿದ್ದು, ಠಾಣೆ ಸುತ್ತಮುತ್ತ ನಿಷೇಧಾಜ್ಞೆ ಸಹ ಜಾರಿ ಮಾಡಲಾಗಿದೆ. ಜೊತೆಗೆ, ಠಾಣೆಯ ಕಾಂಪೌಂಡ್ ಹಾಗೂ ಪ್ರವೇಶ ದ್ವಾರವನ್ನು ಶಾಮಿಯಾನ ಬಟ್ಟೆಯಿಂದ ಮುಚ್ಚಲಾಗಿದೆ.‘ಠಾಣೆಯಲ್ಲಿರುವ ದರ್ಶನ್‌ ಅವರಿಗೆ ಐಷಾರಾಮಿ ಸೇವೆ ಒದಗಿಸಲಾಗುತ್ತಿದೆ. ಅವರು ಕೇಳುವ ಊಟವನ್ನೆಲ್ಲ ಪೊಲೀಸರು ತಂದುಕೊಡುತ್ತಿದ್ದಾರೆ. ಜೊತೆಗೆ, ಸೇದಲು ಸಿಗರೇಟ್ ನೀಡುತ್ತಿದ್ದಾರೆ. ಇದನ್ನು ಮರೆಮಾಚಲು ಠಾಣೆಯ ಸುತ್ತಲೂ ಶಾಮಿಯಾನ ಬಟ್ಟೆ ಕಟ್ಟಿದ್ದಾರೆ’ ಎಂದು ಸ್ಥಳೀಯರು ದೂರಿದರು.

News

ಕೈತಪ್ಪಿದ ಕೃಷಿ ಖಾತೆ; ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಪಡೆದ ಎಚ್‌ಡಿಕೆ

10th June 2024

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿದ್ದು, ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಪಡೆದುಕೊಂಡಿದ್ದಾರೆ.

News

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟ, ಜೂನ್‌ 13ಕ್ಕೆ ಮೊದಲ ಸಂಪುಟ ಸಭೆ

9th June 2024

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ವಾಪಸ್ ಪಡೆಯಲಾಗಿದೆ. ಸರ್ಕಾರಿ ಆಡಳಿತ ಯಂತ್ರ ಮತ್ತೆ ಕಾರ್ಯ ಆರಂಭಿಸಿದ್ದು, ಸರ್ಕಾರಗಳು ಸಹ ಪ್ರಮುಖ ತೀರ್ಮಾನ ಕೈಗೊಳ್ಳಲು ಅನುಕೂಲವಾಗಿದೆ. ಕರ್ನಾಟಕದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್. ಲೋಕಸಭೆ ಚುನಾವಣೆ 2024ರಲ್ಲಿ ಪಕ್ಷ ರಾಜ್ಯದ 28 ಕ್ಷೇತ್ರಗಳ ಪೈಕಿ 9ರಲ್ಲಿ ಜಯಗಳಿಸಿದೆ. ಪ್ರತಿಪಕ್ಷವಾದ ಬಿಜೆಪಿ 17, ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿವೆ. ಕಾಂಗ್ರೆಸ್ ನಿರೀಕ್ಷೆ ಮಾಡಿದಷ್ಟು ಸೀಟುಗಳು ಪಕ್ಷಕ್ಕೆ ಲಭ್ಯವಾಗಿಲ್ಲ.

News

ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ – ಮುಂಗಾರು ಆರಂಭದಲ್ಲೇ ಹಲವೆಡೆ ಅಬ್ಬರಿಸಿದ ವರುಣ

2nd June 2024

ಬೆಂಗಳೂರು: ರಾಜಧಾನಿಯಲ್ಲಿ ಶನಿವಾರ ರಾತ್ರಿಯಿಡೀ ಭಾರೀ (Bengaluru Rains) ಮಳೆಯಾಗಿದೆ. ಮುಂಗಾರು ಆರಂಭದಲ್ಲೇ ರಾಜ್ಯದ ಹಲವೆಡೆ ಪ್ರವಾಹದ ಸ್ಥಿತಿ ಕಂಡುಬಂದಿದೆ.


ನಗರದ ಹಲವೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಅಲ್ಲಲ್ಲಿ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಅಬ್ಬರ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.


ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

News

ಕುತೂಹಲ ಕೆರಳಿಸಿದೆ ಮೈಸೂರು ಲೋಕಸಭಾ ಕ್ಷೇತ್ರ

20th April 2024

ಲೋಕಸಭೆ ಚುನಾವಣೆ ಹತ್ತಿರವಾಗ್ತಿದೆ. ಟಿಕೆಟ್‌ಗಾಗಿ ಬಿಜೆಪಿಯಲ್ಲಿ ಸಾಕಷ್ಟು ಫೈಟ್ ನಡೆಯುತ್ತಿದೆ. ಕೊಡಗು- ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತದೆ ಎಂಬ ಕುತೂಹಲ ಇದೀಗ ಸೃಷ್ಟಿಯಾಗಿದೆ. ಎರದು ಬಾರಿ ಚುನಾವಣೆಯಲ್ಲಿ ಗೆದ್ದ ಹಾಲಿ ಸಂಸದ ಪ್ರತಾಪ ಸಿಂಹಗೆ ಈ ಬಾರಿ ಟಿಕೆಟ್ ಕೊಡುವ ಸಾಧ್ಯತೆಗಳು ಕಡಿಮೆ ಎಂಬ ಚರ್ಚೆಯೂ ಬಿಜೆಪಿ ಪಾಳಯದಲ್ಲಿ ನಡೆಯುತ್ತಿದೆ. ಅಷ್ಟಕ್ಕೂ ಈ ಬಾರಿ ಪ್ರತಾಪ ಸಿಂಹಗೆ ಟಿಕೆಟ್ ಕೈತಪ್ಪಿಸಲು ಪ್ರಯತ್ನವನ್ನು ಯಾರು ಮಾಡುತ್ತಿದ್ದಾರೆ? ಏಕೆ ಮಾಡುತ್ತಿದ್ದಾರೆ ಎಂಬ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ.