
30th October 2024
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೆ ದರ್ಶನ್ ವಿರುದ್ಧ ಹೋರಾಟ ಮುಂದುವರೆಸುತ್ತೇವೆ ಎಂದು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರು ಹೇಳಿದ್ದಾರೆ. ದರ್ಶನ್ ಗೆ ಬೇಲ್ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ ಮಾತನಾಡಿ, ನಾವು ಕೋರ್ಟ್ ತೀರ್ಪಿಗೆ ತಲೆಬಾಗುತ್ತೇವೆ. ಆದರೆ ದರ್ಶನ್ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.