
12th January 2025
ಸ್ವಾಮಿ ವಿವೇಕಾನಂದರ ಜಯಂತಿ
ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರವಿವಾರ ಸ್ವಾಮಿ ವಿವೇಕಾನಂದ ಜಯಂತಿಯನ್ನು ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಸಾಂಕೇತಿಕವಾಗಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು.
ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ವೀರ ಸನ್ಯಾಸಿ, ಯುವ ಜನರ ಸ್ಪೂರ್ತಿಯ ಚಿಲುಮೆ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ ಎಸ್ ಪಾಟೀಲ, ಮಾಜಿ ಶಾಸಕ ಡಿ ಆರ್ ಪಾಟೀಲ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ ಬಿ ಅಸೋಟಿ, ತಾಲೂಕ ಅಧ್ಯಕ್ಷ ಅಶೋಕ್ ಮಂದಾಲಿ, ಸಿದ್ದು ಪಾಟೀಲ, ಎಸ್ ಎನ್ ಬಳ್ಳಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದ ಗೌಡ ಪಾಟೀಲ ಉಪಸ್ಥಿತರಿದ್ದರು.
ಗದಗ ರಾಮಕೃಷ್ಣ ಆಶ್ರಮದ ಜಗನ್ನಾತಾನಂದ ಶ್ರೀಗಳು ಸಾನಿಧ್ಯ ವಹಿಸಿದ್ದರು.
ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್ ಎಸ್ ಬುರಡಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.
12th January 2025
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ
ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದ
ಓಂ ಏಕದಂತಾಯ ವಿಧ್ಮಹೆ
ವಕ್ರತುಂಡಾಯ ಧೀಮಹಿ
ತನ್ನೋ ದಂತಿ ಪ್ರಚೋದಯಾತ್
ಮೂಷಿಕ ವಾಹನ ಮೋದಕ ಹಸ್ತ
ಚಾಮರ ಕರ್ಣ ವಿಳಂಬಿತ ಸೂತ್ರ
ವಾಮನ ರೂಪ ಮಹೇಶ್ವರ ಪುತ್ರ
ವಿಘ್ನ ವಿನಾಯಕ ಪಾದ ನಮಸ್ತೆ
ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್
ಗಜಾನನಂ ಭೂತ ಗಾಣಧಿ ಸೇವಿತಂ
ಕಪಿಥ ಜಂಬೋ ಫಲ ಸಾರ ಭಕ್ಷಿತಂ
ಉಮಾಸುತಂ ಶೋಕ ವಿನಾಶಕಾರಣಂ
ನಮಾಮಿ ವಿಘ್ನೇಶ ಪಾದ ಪಂಕಜಂ.
ಗಣಾನಾಂ ತ್ವಂ ಗಣಪತಿ ಗಂ ಹವಾಮಹೇ
ಕವಿಂ ಕವೀನಾಂ ಉಪಮಸ್ರ ವಸ್ತಮಂ
ಜ್ಯೇಷ್ಠ ರಾಜಂ ಬ್ರಹ್ಮಣಾಂ ಬ್ರಹ್ಮಣಸ್ಪತ
ಆನಶ್ರುನ್ವನ್ನ ಊತಿಭಿ ಸೀದ ಸಾದನಂ
ಶ್ರೀಕಂಠೋ ಮಾತುಲೋ ಯಸ್ಯ, ಜನನೀ ಸರ್ವ ಮಂಗಳಾ
ಜನಕ: ಶಂಕರೋ ದೇವಃ, ತಮ್ ವಂದೇ ಕುಂಜರಾನನಂ
ಗಜವಕ್ತ್ರಂ ಸುರ-ಶ್ರೇಷ್ಟಂ
ಕರ್ಣ ಚಾಮರ ಭೂಷಿತಾಂ
ಪಾಶಾಂಕುಶ ಧರಂ ದೇವಂ
ವಂದೆಹಂ ಗಣನಾಯಕಂ
ಏಕದಂತಂ ಮಹಾಕಾಯಂ ತಪ್ತಕಾಜ್ಞ್ಚಂಸಂನಿಭಮ್
ಲಂಬೋದರಂ ವಿಶಾಲಾಕ್ಷಂ ವಂದೆಹಂ ಗಣನಾಯಕಂ
ಏಕದಂತಂ ಮಹಕಾಯಂ
ಲಂಬೋದರ ಗಜಾನನಂ
ವಿಘ್ನ ನಾಶಕರ್ಮ ದೇವಂ
ಹೇರಮ್ಬಂ ಪ್ರಾಣ ಮಾಮ್ಯಹಂ
ಪ್ರಸನ್ನ ವಿನಾಯಕಂ ದೇವಂ ಪೆರಿವನ-ಪುರ ಸಂಸ್ತಿತಂ
ಸರ್ವ ವಿಘ್ನ ಹರಂ ನಿತ್ಯಂ ವಂದೇ ಶ್ರೀ ಕುಂಜರಾನನಂ
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾ
ಲಂಬೋದರಾಯ ಸಕಲಾಯ ಜಗದ್ವಿತಾಯ
ನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯ
ಗೌರಿ-ಸುತಾಯ ಗಣನಾಥ ನಮೋ ನಮಸ್ತೆ