
5th December 2024
ಸೂರ್ಯ ನಾರಾಯಣರೆಡ್ಡಿ ಹುಟ್ಟು ಹಬ್ಬದ ಪ್ರಯುಕ್ತ ಕಟ್ಟಿಮನೆ ನಾಗೇಂದ್ರ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರ
ಬಳ್ಳಾರಿ ಡಿ ೦೪. ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡರಾದ ನಾರಾ ಸೂರ್ಯನಾರಾಯಣರೆಡ್ಡಿಯವರ ಹುಟ್ಟು ಹಬ್ಬದ ಪ್ರಯುಕ್ತ ಎಪಿಎಂಸಿ ಅಧ್ಯಕ್ಷರಾದ ಕಟ್ಟೆಮನೆ ನಾಗೇಂದ್ರ ಅವರ ನೇತೃತ್ವದಲ್ಲಿ ಎಪಿಎಂಸಿಯ ಆವರಣದಲ್ಲಿ ಡಿ ೦೫ ಗುರುವಾರರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೫ ಗಂಟೆಯ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದಾರೆ.
ಈ ಶಿಬಿರದಲ್ಲಿ ಜನರಲ್ ಹೆಲ್ತ್ ಚೆಕಪ್, ಸುಗರ್,ರಕ್ತದೊತ್ತಡ,ಮತ್ತಿತರ ರೋಗಗಳಿಗೆ ನುರಿತ ವ್ಶೆದ್ಯರಿಂದ ತಪಾಸಣೆ,ಇಸಿಜಿ, ಇನ್ನಿತರ ರಕ್ತ ಪರೀಕ್ಷೆಗಳು,ಉಚಿತ ಔಷದಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಮತ್ತು ಬಿಮ್ಸ್ ಆಸ್ಪತ್ರೆಯಲ್ಲಿ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷರಾದ ಕಟ್ಟೆಮನೆ ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಅವಕಾಶವನ್ನು ಬಳ್ಳಾರಿಯ ನಾಗರೀಕರು ಸದ್ಭಳಕೆ ಮಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ