
5th December 2024
ಕಟ್ಟೆಮನೆ ನಾಗೇಂದ್ರ ನೇತೃತ್ವದಲ್ಲಿ ಸೂರ್ಯನಾರಾಯಣ ರೆಡ್ಡಿ ಹುಟ್ಟು ಹಬ್ಬ ಅಧ್ದೂರಿ ಆಚರಣೆ
ಅನ್ನದಾನ ಕಾರ್ಯಕ್ರಮ,ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
ಬಳ್ಳಾರಿ ಡಿ ೦೫. ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ೭೧ ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಎಪಿಎಂಸಿಯಲ್ಲಿ ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ ನೇತೃತ್ವದಲ್ಲಿ ಹುಟ್ಟುಹಬ್ಬವನ್ನು ಕೇಕ್ ಕಟ್ಮಾಡುವುದರ ಮೂಲಕ ಅಧ್ದೂರಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಿ ೦೫ ರಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೫ ಗಂಟೆಯ ವರೆಗೆ ಎಪಿಎಂಸಿ ಆವರಣದಲ್ಲಿ ಐದು ನೂರಕ್ಕೂ ಹೆಚ್ಚಿನ ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯ್ತು. ನಂತರ ಬಿಮ್ಸ್ ಆಸ್ಪತ್ರೆಗೆ ತೆರಳಿ ಅಲ್ಲಿನ ರೋಗಿಗಳ ಸಂಬ0ಧಿಕರಿಗೆ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ ಬಿ.ರಾಂಪ್ರಸಾದ್, ಎಪಿಎಂಸಿ ಉಪಾಧ್ಯಕ್ಷ ರಾಮಣ್ಣ, ಸದಸ್ಯರು, ಮುಖಂಡರುಗಳಾದ ಅಬ್ದುಲ್ ಬಾರಿ, ವೆಂಕಟನಾಯ್ಡು, ತನ್ವೀರ್, ಕೇಶವ, ಯಲ್ಲಪ್ಪ, ಪ್ರಭಾಕರ್ ರೆಡ್ಡಿ, ಅಂಜೀರ್, ಅಬ್ದುಲ್, ಸಮೀರ್ ಬಾಷ,ಅಕ್ಕಿಶಿವಕುಮಾರ್, ವಿಶ್ವನಾಥ ಇನ್ನಿತರರು ಉಪಸ್ಥಿತರಿದ್ದರು.
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ