
15th December 2024
ಸತ್ಯಕಾಮ ವಾರ್ತೆ ಗುರುಮಠಕಲ್:
ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆಯಾಗಿವೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್ ಅವರು ಅವರು ಹೇಳಿದರು.
ತಾಲ್ಲೂಕಿನ ಅನುಪುರ ಗ್ರಾಮದಲ್ಲಿ ಅನುಪುರ ಗ್ರಾಮ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹಾಗೂ ಕಲಿಕೆ ಟಾಟಾ ಟ್ರಸ್ಟ್ ಬೆಂಗಳೂರು ಹಮ್ಮಿಕೊಳ್ಳಲಾಗಿದ್ದ ಬಾಲಮೇಳ ಕಾರ್ಯಕ್ರಮಲ್ಲಿ ಮಾತನಾಡಿದರು.
ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಶಿಕ್ಷಣಕ್ಕೆ ಬೇಕಾದ ಉತ್ತಮ ಅಡಿಪಾಯಯವನ್ನು ಕಲಿಕಾ ಚಟುವಟಿಕೆಗಳ ಮೂಲಕ ದೊರಕಿಸಿಕೊಡಲಾಗುತ್ತದೆ ಎಂದರು.
ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಶಿಕ್ಷಣಕ್ಕೆ ಬೇಕಾದ ಉತ್ತಮ ಅಡಿಪಾಯಯವನ್ನು ಕಲಿಕಾ ಚಟುವಟಿಕೆಗಳ ಮೂಲಕ ದೊರಕಿಸಿಕೊಡಲಾಗುತ್ತದೆ ಎಂದರು.
ಬಾಲಮೇಳ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ಕೆಲಸ ಮಾಡುತ್ತಿದೆ. ಮಕ್ಕಳ ಅಭಿರುಚಿ ಗುರುತಿಸಿ ಪೋಷಕರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್,
ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಂಬರೀಷ ಪಾಟೀಲ್, ಸಿ. ಡಿ. ಪಿ. ಓ ಶರಣಬಸಪ್ಪ,
ಗೌರಮ್ಮ, ಶಾಂತ, ಮುದ್ದೇಶ, ಸೇರಿದಂತೆ ಇತರರು ಇದ್ದರು.
ಗುರುಮಠಕಲ್ ತಾಲ್ಲೂಕಿನ ಅನುಪುರ ಗ್ರಾಮದ ಅಂಗನವಾಡಿ ಮಕ್ಕಳಿಂದ ಬಾಲಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ ಗೌಡ ಪಾಟೀಲ್ ಅವರು ಮಾತನಾಡಿದರು.