28th December 2024
ಕೆ.ಆರ್.ಪೇಟೆ,ಡಿ.೨೮: ಪಟ್ಟಣದ ಜೆ.ಎಂ.ಎಫ್.ಸಿ ಅಪರ ಸಿವಿಲ್ ನ್ಯಾಯಾಲಯದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಿ.ಸುರೇಂದ್ರ ಅವರು ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಕಿರಿಯ ವಯಸ್ಸಿನಲ್ಲಿಯೇ ಉತ್ಪಮ ಸಾಧನೆ ಮಾಡಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಹೋಬಳಿಯ ಊದವಾರಿಪಲ್ಲಿ ಗ್ರಾಮದ ಕೂಲಿ ಮಾಡಿ ಜೀವನ ಸಾಗಿಸುವ ಗಂಗುಲಯ್ಯ ಹಾಗೂ ಕಮಲಮ್ಮ ದಂಪತಿಗಳ ಪುತ್ರರಾದ ಜಿ.ಸುರೇಂದ್ರ ಅವರು ಒಂದರಿAದ ೭ನೇ ತರಗತಿಯವರೆಗೆ ಹೇರೋಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿಯೇ ವ್ಯಾಸಂಗ ಮಾಡಿದ್ದಾರರ. ನಂತರ ಪೋಷಕರ ಸಹಕಾರದಿಂದ ಬೆಂಗಳೂರಿನ ವಿಜಯನಗರದ ಉದಯ ವಿದ್ಯಾಸಂಸ್ಥೆಯಲ್ಲಿ ೮ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲದಲ್ಲಿ ಬಿಎ ಪದವಿ ಪಡೆದು ಅಲ್ಲಿಯೇ ಇರುವ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ವಿದ್ಯಾಭ್ಯಾಸ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ೨೦೧೪ರಂದು ವಕೀಲ ವೃತ್ತಿಗೆ ಪಾದಾರ್ಪಣೆ ಮಾಡಿ ಬೆಂಗಳೂರಿನ ಖ್ಯಾತ ವಕೀಲರಾದ ಹೆಚ್.ಎಸ್.ರಾಘವೇಂದ್ರ ಅವರ ಬಳಿ ಕಿರಿಯ ವಕೀಲರಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ೨೦೨೨ರಲ್ಲಿ ಸರ್ಕಾರಿ ಅಭಿಯೋಜಕರ ಹುದ್ದೆಗೆ ಕರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ೨೦೨೩ರಲ್ಲಿ ಕೆ.ಆರ್.ಪೇಟೆಯ ಪಟ್ಟಣದ ಅಪರ ಸಿವಿಲ್ ನ್ಯಾಯಾಲಯದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕಳೆದ ಒಂದು ವರ್ಷದಿಂದ ಕೆ.ಆರ್.ಪೇಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಉತ್ತಮ ಸಾಧನೆ ಮಾಡುವ ಮೂಲಕ ತಮ್ಮ ಬಡ ತಂದೆ-ತಾಯಿಗಳಿಗೆ ಕೀರ್ತಿ ತಂದಿದ್ದಾರೆ.
ತಮ್ಮ ಕನಸನ್ನು ಸಾಕಾರ ಮಾಡಿಕೊಂಡಿರುವ ಜಿ.ಸುರೇಂದ್ರ ೨೦೨೩ರಲ್ಲಿ ಎಪಿಪಿ/ಎಜಿಪಿ ಆಗಿ ಕೆ.ಆರ್.ಪೇಟೆಯ ಅಪರ ಸಿವಿಲ್ ನ್ಯಾಯಾಲಯದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕಳೆದ ಒಂದು ವರ್ಷದಿಂದ ಕೆ.ಆರ್.ಪೇಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪಟ್ಟಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಿರುವ ಸುರೇಂದ್ರ ಅವರ ನ್ಯಾಯಾಲಯಕ್ಕೆ ನ್ಯಾಯವನ್ನು ಅರಸಿ ಬರುವ ನೊಂದ ಜನರ ಧನಿಯಾಗಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಕಾನೂನು ಅರಿವು-ನೆರವು ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಗ್ರಾಮೀಣ ಪ್ರದೇಶದ ಬಡಜನರು ಹಾಗೂ ನೊಂದವರು ಉಚಿತವಾಗಿ ಕಾನೂನು ನೆರವನ್ನು ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಲು ಕಾರಣರಾಗಿದ್ದಾರೆ. ಕೆ.ಆರ್.ಪೇಟೆಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಕೀಲರ ಸಂಘದ ಮಾಜಿಅಧ್ಯಕ್ಷ ಹಾಗೂ ನೋಟರಿಗಳಾದ ಎನ್.ಆರ್.ರವಿಶಂಕರ್ ಹಾಗೂ ವಕೀಲ ನಯಾಜ್ಪಾಷಾ ಅವರು ನೂತನ ಜಡ್ಜ್ ಜಿ.ಸುರೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ