28th December 2024
ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಮೂರು ಮಕ್ಕಳಿಗೆ ಹುಚ್ಚು ನಾಯಿ ಕಚ್ಚಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ತಡವಲಗಾ ಗ್ರಾಮದಲ್ಲಿ ನಡೆದಿದೆ.ಗಾಯಗೊಂಡಿರು ಮಕ್ಕಳಾದ ಮಹ್ಮದ್ ಇಬ್ರಾಹಿಂ ಕಲಬುರ್ಗಿ ( 8) ಅಫ್ಘಾನ್ ಕಸ್ಸಾಬ ( 12),ಅಜಾನ್ ಕಸ್ಸಾಬ (5) ಸೇರಿದಂತೆ ಹತ್ತು ಜನರಿಗೂ ಕ್ಕಿಂತ ಹೆಚ್ಚು ಜನರಿಗೂ ಕಚ್ಚಿದೆ.ಗಾಯಗೊಂಡ ಮಕ್ಕಳನ್ನು ತಡವಲಗಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು.ಚಿಕಿತ್ಸೆ ನೀಡಿ ನಂತರ ಮಾತನಾಡಿದ ಇಂಡಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಹಾಗೂ ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ಆಡಳಿವೈದ್ಯಾಧಿಕಾರಿ ಡಾಕ್ಟರ್ ಕೆ ಎಸ್ ಜಾಧವ ಅವರು ಹುಚ್ಚು ನಾಯಿ ಕಚ್ಚಿ ತಕ್ಷಣ 24 ಗಂಟೆ ಒಳಗಾಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ನುಡಿಯಬೇಕು ತಾವು ಯಾವುದೇ ರೀತಿಯ ಮುಡಿ ನಂಬಿಕೆಗಳಿಗೆ ಒಳಗಾಗಿದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು, ವೈದ್ಯರು ಹೇಳಿದ ಹಾಗೆ ನಾಲ್ಕು ಬಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು.ಇತ್ತಿಚೀನ ದಿನಗಳಲ್ಲಿ ಬೀದಿ ನಾಯಿಗಳ ಕಾಟದಿಂದ ತಪ್ಪಿಸಿಕೊಳ್ಳಲು ಮಕ್ಕಳ ಬಗ್ಗೆ ನಿಗಾವಹಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಈ ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಚ್ಚಿತಾ ಆಕಾಶ್ ಡಾ.ಗುರುರಾಜ ಜಾಗೀರದಾರ ಡಾ.ಫಾರೂಕ್ ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು.
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ