14th December 2024
ಕಲಾದಗಿ- ಗ್ರಂಥಾಲಯಗಳು ಮನುಷ್ಯನ ಜ್ಞಾನವನ್ನು ಹೆಚ್ಚಿಸುವ ಮತ್ತು ಅಮೂಲ್ಯ ಸಮಯವನ್ನು ಸದುಪಯೋಗಪಡಿಸುವ ಸಾಧನಗಳಾಗಿವೆ ಎಂದು ಕಲಾದಗಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಗ್ರಂಥಪಾಲಕ ಸಿ.ವಾಯ್.ಮೆಣಸಿನಕಾಯಿ ಹೇಳಿದರು.
ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಅಡಿಯಲ್ಲಿ ಗ್ರಂಥಾಲಯ ವಿಜ್ಞಾನ ವಿಭಾಗದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಗ್ರಂಥಾಲಯದ ಮಹತ್ವ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಾ ಇಂದು ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಯುವಕರು ಮೊಬೈಲ್ ಹಿಡಿದುಕೊಂಡು ಕಾಲಹರಣ ಮಾಡುತ್ತಿದ್ದಾರೆ. ತಮ್ಮ ಉಜ್ವಲ ಭವಿಷ್ಯಕ್ಕಾಗಿ ಗ್ರಂಥಾಲಯಕ್ಕೆ ಹೋಗಿ ಪುಸ್ತಕಗಳನ್ನು ಓದಿ ಜ್ಞಾನವನ್ನು ಪಡೆದುಕೊಳ್ಳಬಹುದು. ಪುಸ್ತಕದಿಂದ ಕಲಿತ ಜ್ಞಾನದಿಂದ ಸ್ಪರ್ಧಾತ್ಮಕ ಮತ್ತು ಉನ್ನತ ಪರೀಕ್ಷೆ ಬರೆದು ಯಶಸ್ಸು ಸಾಧಿಸಬಹುದೆಂದರು.
ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ.ಎಚ್.ಬಿ.ಮಹಾಂತೇಶ ಮಾತನಾಡುತ್ತಾ, ಒಂದು ಪುಸ್ತಕ ನೂರು ಸ್ನೇಹಿತರಿಗೆ ಸಮ ಎಂದು ಭಾವಿಸಲಾಗುತ್ತದೆ. ವಿದ್ಯಾರ್ಥಿಗಳ ಓದಿಗೆ ಗ್ರಂಥಾಲಯ ಅವಶ್ಯವಾಗಿವೆ. ಕಾಲೇಜಿನ ಗ್ರಂಥಾಲಯದಲ್ಲಿನ ಪುಸ್ತಕಗಳ ಬಳಕೆ ಮಾಡಿಕೊಂಡು ತಮ್ಮ ಜ್ಞಾನವನ್ನು ವೃದ್ದಿಸಿಕೊಳ್ಳಬೇಕೆಂದರು.
ಉಪನ್ಯಾಸಕಿ ಶ್ರಿದೇವಿ ಮುಂಡಗನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರು, ಐಕ್ಯೂಎಸಿ ಸಂಚಾಲಕರಾದ ಪ್ರೊ.ಸರೋಜಿನಿ ಹೊಸಕೇರಿ ಸೇರಿದಂತೆ ಎಲ್ಲ ಉಪನ್ಯಾಸಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕು.ಯಂಕಮ್ಮ ಸ್ವಾಗತಿಸಿದರು.ಕು.ಶುಷ್ಮಾ ಗುರಿಕಾರ ನಿರೂಪಿಸಿದರು.ಕು.ರೂಪಾ ಸಂಶಿ ವಂದಿಸಿದರು.
ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಿ:-ಬಿ.ಫೌಜಿಯಾ ತರನ್ನುಮ್
ಶಿಕ್ಷಣದಿಂದ ಮಾತ್ರ ಎಲ್ಲಾ ಕ್ಷೇತ್ರಗಳಲ್ಲಿ ಬದಲಾವಣೆ ಸಾಧ್ಯ :ಶಾಸಕ ತುನ್ನೂರ
ಜನಪದ ಸಾಹಿತ್ಯದ ತಾಯಿ ಬೇರು: ಹಮೀದಾ ಬೇಗಂ ದೇಸಾಯಿ ಪೃಥ್ವಿ ಫೌಂಡೇಶನ್ ದಿಂದ " ಜಾನಪದ ಸಂಭ್ರಮ" ಕಾರ್ಯಕ್ರಮ
ಗಣಿತ ವಿಜ್ಞಾನದ ತಾಯಿ ಬೇರು : ಪ್ರಾಚಾರ್ಯ ಎಂ. ಜಿ. ಹೆಗಡೆ ಗಣಿತ ವಿಜ್ಞಾನದ ತಾಯಿ ಬೇರು. ವೈಜ್ಞಾನಿಕ ಸಂಶೋಧನೆಯು ಗಣಿತದ ಮೇಲೆಯೇ ಅವಲಂಬಿಸಿದೆ ಎಂದು ಪ್ರಾಚಾರ್ಯ ಎಂ. ಜಿ. ಹೆಗಡೆ ಅವರು ಅಭಿಪ್ರಾಯಪಟ್ಟರು.