
3rd December 2024
ತಾಲೂಕಿನ ಅಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವೆಂಕಟಚಾಲ ಅವಿರೋಧವಾಗಿ ಆಯ್ಕೆಯಾದರು. ಹಿಂದೆ ಅಧ್ಯಕ್ಷರಾಗಿದ್ದ ಮುದ್ದು ನಾಯಕ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಕಾಂಗ್ರೆಸ್ ಬೆಂಬಲಿತ ಸದಸ್ಯ ವೆಂಕಟಚಲ ಅವರನ್ನು ಹೊರತುಪಡಿಸಿ ಇನ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿ ತೋಟಗಾರಿಕೆ ಇಲಾಖೆಯ ಶಿವರಂಜಿನಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷ ವೆಂಕಟಚಾಲ ಮಾತನಾಡಿ ಸರ್ವ ಸದಸ್ಯರ ಸಹಕಾರದೊಂದಿಗೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರ ಸಹಕಾರದೊಂದಿಗೆ ಅಗರ ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಸದಸ್ಯರಾದ ರಾಜಮ್ಮ, ಕುಮಾರ ,ಶೋಭಾ, ನಿರ್ಮಲ ,ಮುದ್ದ ನಾಯಕ, ಸುರೇಶ್, ಅನ್ನಪೂರ್ಣ, ನಳಿನ ಕುಮಾರಿ, ನಾಗರಾಜು ,ರಾಣಿ ,ಸ್ವಾಮಿ, ಪಿಡಿಒ ಉಷಾರಾಣಿ , ಮುಖಂಡರುಗಳಾlದ ಅಗರ ವೆಂಕಟೇಶ ಅಗರ ಶಿವಣ್ಣ, ಅಗರ ಲಿಂಗರಾಜು, ಕಿನಕಹಳ್ಳಿ ರಾಚಯ್ಯ
ಸಿಬ್ಬಂದಿಗಳಾದ ಸುರೇಶ್ ಸೇರಿದಂತೆ ಗ್ರಾಮಸ್ಥರು ಹಾಗೂ ಮುಖಂಡರುಗಳು ಹಾಜರಿದ್ದರು
undefined
ಸರ್ಕಾರದ ಯೋಜನೆಗಳ ಯಶಸ್ಸಿಗೆ ಪ್ರಾಮಾಣಿಕತೆ ಅತ್ಯವಶ್ಯ. ಮುಸಲ್ಮಾರಿ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕೀಹೊಳಿ ಅಭಿಮತ.
ಕಾರ್ಯಸಿದ್ಧಿ ಆಂಜನೇಯನಿಗೆ ಕೊಳವೆ ಬಾವಿ. ದಾನಿ ದಯಾನಂದ ಪಾಟೀಲ ಕಾರ್ಯಕ್ಕೆ ವಿನಯ ನಾವಲಗಟ್ಟಿ ಶ್ಲ್ಯಾಘನೆ.
ಪ.ಜಾತಿ,ಪಂಗಡದ ಅಭಿವೃದ್ಧಿಗೆ ಇಟ್ಟ ಹಣ ದರ್ಬಳಿಕೆ ಖಂಡಿಸಿ ಮಾ.೪ ರಂದು ಬಿಜೆಪಿ ಪ್ರತಿಭಟನೆ