
22nd October 2024
ತುಂಗಾಕಿರಣ ಸುದ್ದಿ
ಕುಷ್ಟಗಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಅಡಿಯಲ್ಲಿ ಕುಷ್ಟಗಿ ಯೋಜನಾ ಕಛೇರಿ ವ್ಯಾಪ್ತಿಯ ತಾಲೂಕಾ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ಇಲ್ಲಿಯ ಎನ್ ಸಿ ಹೆಚ್ ಪ್ಯಾಲೇಸ್ ದಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ದೇವೇಂದ್ರಪ್ಪ ಬಳೂಟಗಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮ ಬಹಳ ಅರ್ಥಗರ್ಭಿತವಾಗಿ ನಡೆಯುತ್ತವೆ. ಮಧ್ಯವರ್ಜನಂತಹ ಕಾರ್ಯಕ್ರಮಗಳು ಜನರ ಜೀವನವನ್ನೇ ಬೆಳಗಿಸಿದಂತಹ ಕಾರ್ಯಕ್ರಮಗಳಾಗಿವೆ. ಧರ್ಮಸ್ಥಳದ ಯಾವುದೇ ಕಾರ್ಯಕ್ರಮದಲ್ಲಿ ನಾನು ಯಾವುದೇ ಫಲಾಪೇಕ್ಷೆ ಇಲ್ಲದೆ ಸಕ್ರಿಯವಾಗಿ ಭಾಗವಹಿಸುತ್ತೇನೆ ಎಂದರು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗಂಗಾವತಿ ಶಾಖೆಯ ಪ್ರಬಂಧಕರಾದ ವಿರುಪಾಕ್ಷಪ್ಪ ಮಾತನಾಡಿ ಬ್ಯಾಂಕಿನ ನಿಯಮಗಳು ನಿಬಂಧನೆಗಳು ಮತ್ತು ಸ್ವ ಸಹಾಯ ಸಂಘಗಳ ಸಾಲದ ವ್ಯವಹಾರದ ಬಗ್ಗೆ ತಿಳಿಸಿದರು. ಬ್ಯಾಂಕ್ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಬಿ.ಸಿ ಗಳನ್ನು ಆಯ್ಕೆ ಮಾಡಿಕೊಂಡಿದೆ. ಸಂಘಗಳನ್ನು ರಚನೆ ಮಾಡಿ ಸಾಮಾನ್ಯ ಜನರಿಗೆ ಉಳಿತಾಯದ ಜೊತೆಗೆ ಆರ್ಥಿಕ ಸಹಕಾರವನ್ನು ನೀಡುತ್ತಾ ಬಂದಿದೆ, ಬ್ಯಾಂಕಿನ ನಿಯಮಗಳು ನಿಬಂಧನೆಗಳು ಮತ್ತು ಸ್ವ ಸಹಾಯ ಸಂಘಗಳ ಸಾಲದ ವ್ಯವಹಾರದ ಬಗ್ಗೆ ತಿಳಿಸಿದರು.
ಕೊಪ್ಪಳ ಜಿಲ್ಲೆಯ ನಿರ್ದೇಶಕರಾದ ಪ್ರಕಾಶರಾವ್ ಮಾತನಾಡಿ ಯೋಜನೆಯ ಕಾರ್ಯಕ್ರಮಗಳು ನಡೆದು ಬಂದ ಹಾದಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗಡೆಯವರ ಉದ್ದೇಶ ಮತ್ತು ಕನಸುಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಕುಷ್ಟಗಿ ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಾಡಿದ ಸಾಧನೆಗಳನ್ನು ಯೋಜನಾಧಿಕಾರಿಗಳು ಅಂಕಿ ಅಂಶಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವೀರೇಶ್ ಬಂಗಾರಶೆಟ್ರು, ಶೇಖರ್ ನಾಯ್ಕ, ಮಹಾಂತಯ್ಯ ಅರಳೆಲಿಮಠ, ಜಯತೀರ್ಥ ದೇಸಾಯಿ, ವಿ ವಿ ಹಿರೇಮಠ, ರುದ್ರಪ್ಪ ಅಕ್ಕಿ ಹಾಗೂ ಜನಜಾಗೃತಿ ವೇದಿಕೆ ವೇದಿಕೆ ಸದಸ್ಯರು ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿದರು. ತಾಲೂಕಿನ 12 ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಕಚೇರಿ ಸಿಬ್ಬಂದಿಗಳು ಮತ್ತು ಒಟ್ಟು 108 ಒಕ್ಕೂಟದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಅಡಿಯಲ್ಲಿ ಕುಷ್ಟಗಿ ಯೋಜನಾ ಕಛೇರಿ ವ್ಯಾಪ್ತಿಯ ತಾಲೂಕಾ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ಎನ್
ಸಿ ಹೆಚ್ ಪ್ಯಾಲೇಸ್ ದಲ್ಲಿ ಜರುಗಿತು.
ಡಾ,ಬಿ,ಆರ್,ಅಂಬೇಡ್ಕರ ಪ್ರತಿಮೆಗೆ ಸ್ಥಳವಕಾಶಕ್ಕೆ ಸ್ಪಂಧಿಸಿದ ಸಚಿವ ಡಾ,ಮಾಹಾದೇವಪ್ಪವರಿಗೆ ಗೌರವ ಸನ್ಮಾನ!!
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಸಮಾಜಮುಖಿ ಕಾರ್ಯಗಳಾಗಿವೆ: ಯೋಜನಾಧಿಕಾರಿ ಶೇಖರನಾಯ್ಕ ಹೇಳಿಕೆ
ಚಡಚಣ ಸಂಗಮೇಶ್ವರ ಜಾತ್ರೆಯ ಸಂಭ್ರಮ ಬಾನAಗಳದಲ್ಲಿ ಚಿತ್ತಾರ ಬಿಡಿಸಿದ ಪಟಾಕಿಗಳು